ಕೋಲಾರ: ಮದ್ಯದಂಗಡಿ ತೆರೆದರೆ ಜನಸಂದಣಿ ಹೆಚ್ಚಾಗಲಿದೆ., ಮದ್ಯಕ್ಕಿಂತ ಜನರ ಪ್ರಾಣ ಮುಖ್ಯವಾಗಿದೆ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಅವರು ಏಪ್ರಿಲ್20ರವರೆಗೂ ಕಟ್ಟುನಿಟ್ಟಾಗಿ ಲಾಕ್ಡೌನ್ ಪಾಲನೆ ಮಾಡಬೇಕು ಎಂದು ಆದೇಶ ಮಾಡಿದ್ದಾರೆ. ಮದ್ಯದಂಗಡಿ ತೆರೆಯುವ ಕುರಿತು ಏ.20ರ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ನಾಳೆ ಮದ್ಯದ ಅಂಗಡಿ ತೆರೆಯುವ ನಿರೀಕ್ಷೆ ಇತ್ತು. ಆದರೆ, ನಾಳೆಯಿಂದ ಮದ್ಯದಂಗಡಿ ತೆರೆಯುವುದಕ್ಕೆ ಕಷ್ಟ. ಪ್ರಧಾನಿ ಮೋದಿ ಅವರು ಕಟ್ಟುನಿಟ್ಟಾಗಿ ಲಾಕ್ಡೌನ್ ಮುಂದುವರೆಸಿ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಮದ್ಯದಂಗಡಿ ತೆರೆಯಲಾಗುವುದಿಲ್ಲ. ಇಷ್ಟು ದಿನ ಕಾದಿದ್ದೀರಿ ಇನ್ನು ಸ್ವಲ್ಪ ದಿನ ಕಾದಿರಿ ಮದ್ಯಕ್ಕಿಂತ ಜನರ ಪ್ರಾಣ ಮುಖ್ಯವಾಗಿದೆ ಎಂದು ತಿಳಿಸಿದರು.