ಉತ್ತರಖಂಡ ಮುಖ್ಯಮಂತ್ರಿ ರಾವತ್ ವಿರುದ್ಧ ಸಿಬಿಐ ತನಿಖೆಗೆ ಹೈ ಆದೇಶ

ಡೆಹ್ರಾಡೂನ್ : ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುಲು ಉತ್ತರಾಖಂಡ ಹೈಕೋರ್ಟ್ ಮಂಗಳವಾರ ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ಆದೇಶಿಸಿದೆ.
ಗೋ ಸೇವಾ ಅಯೋಗದ ಮುಖ್ಯಸ್ಥರ ನೇಮಕಕ್ಕೆ ಸಂಬಂಸಿದಂತೆ ರಾವತ್ ಭ್ರಷ್ಟಾಷಾರ ನಡೆಸಿದ್ದಾರೆಂದು ಪತ್ರಕರ್ತರಾದ ಉಮೇಶ್ ಶರ್ಮಾ ಮತ್ತು ಶಿವ ಪ್ರಸಾದ್ ಕೇಸು ದಾಖಲಿಸಿದ್ದರು. ಸಲ್ಲದೆ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ನ್ಯಾಯಮೂರ್ತಿ ರವೀಂದ್ರ ಮೈಥಾನಿ ಅವರ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಮುಖ್ಯಮಂತ್ರಿಗಳ ವಿರುದ್ಧದ ಆರೋಪದ ಸತ್ಯಾಸತ್ಯತೆಗಳನ್ನು ತಿಳಿಯಲು ರಾಜ್ಯದ ಹಿತದೃಷ್ಟಿಯಿಂದ ಡೆಹ್ರಾಡೂನ್ ಸಿಬಿಐ ಪೊಲೀಸ್ ಅೀಕ್ಷಕರಿಗೆ ತನಿಖೆ ನಡೆಸುವಂತೆ ನಿರ್ದೇಶಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ