ಬಜೆಟ್ನಲ್ಲಿ ಘೋಷಿಸಿದ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ಹಂತ ಹಂತವಾಗಿ ಬಜೆಟ್ನಲ್ಲಿ ಘೋಷಿಸಿದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಿದೆ ಎಂದು ಹೇಳಿದರು. ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ಈಗಾಗಲೇ 50 ಕೋಟಿ ರೂಪಾಯಿ ಅನುದಾನ ನೀಡಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ, ಮಂಗಳೂರಿಗೆ ಮಹಾತ್ಮ ಗಾಂಧಿ ನಗರ ವಿಕಾಸ್ ಯೋಜನೆಯಡಿ 125 ಕೋಟಿ ರೂಪಾಯಿ ಒದಗಿಸಲಾಗುವುದು. ಮೀನುಗಾರಿಕೆ ಅಭಿವೃದ್ಧಿ, ಕರಾವಳಿ ಆಂತರಿಕ ಭದ್ರತೆಗೆ ಆದ್ಯತೆ ಸೇರಿದಂತೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಸರಕಾರ ವಿಶೇಷ ಗಮನ ನೀಡಿದೆ ಎಂದರು. ಪ್ರವಾಸೋದ್ಯಮ ಕ್ಷೇತ್ರ ಮುಂದಿನ 6 ತಿಂಗಳಲ್ಲಿ ಹೊಸ ಬದಲಾವಣೆ ಕಾಣಲಿದೆ, ಈ ನಿಟ್ಟಿನಲ್ಲಿ ವಿಶೇಷ ಯೋಜನೆ ರೂಪಿಸಲಾಗಿದೆ. ಸಾಗರದ ಅಲೆಗಳಿಂದ ವಿದ್ಯುತ್ ಉತ್ಪಾದನೆಗೆ ಪೆÇ್ರೀತ್ಸಾಹ ನೀಡಲಾಗುವುದು ಎಂದು ಅವರು ಹೇಳಿದರು. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಾಸಕರಿಗೆ ತಲಾ 50 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ, ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ದೃಢ ಹೆಜ್ಜೆ ಇಡಲಾಗಿದೆ. ರಾಜ್ಯವನ್ನು ಡ್ರಗ್ಸ್ ಮುಕ್ತಗೊಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತಿತರರು ಉಪಸ್ಥಿತರಿದ್ದರು.
Related Articles
3000 ಕೋಟಿ ವೆಚ್ಚದಲ್ಲಿ ಕೊಚ್ಚಿ-ಮಂಗಳೂರು ನಡುವೆ ನೈಸರ್ಗಿಕ ಅನಿಲ ಪೈಪ್ಲೈನ್ ದೇಶಕ್ಕೆ ಅರ್ಪಣೆ ಜನರ ಬದುಕು ಆಗಲಿದೆ ಸುಲಲಿತ: ಪ್ರಧಾನಿ ಮೋದಿ
January 6, 2021
Varta Mitra News - SP
ರಾಷ್ಟ್ರೀಯ, ಪ್ರಧಾನಿ ಮೋದಿ
Comments Off on 3000 ಕೋಟಿ ವೆಚ್ಚದಲ್ಲಿ ಕೊಚ್ಚಿ-ಮಂಗಳೂರು ನಡುವೆ ನೈಸರ್ಗಿಕ ಅನಿಲ ಪೈಪ್ಲೈನ್ ದೇಶಕ್ಕೆ ಅರ್ಪಣೆ ಜನರ ಬದುಕು ಆಗಲಿದೆ ಸುಲಲಿತ: ಪ್ರಧಾನಿ ಮೋದಿ
Seen By: 43 ಮಂಗಳೂರು: ಮಂಗಳೂರು ಮತ್ತು ಕೇರಳದ ಕೊಚ್ಚಿ ನಡುವಿನ ಅನಿಲ ಕೊಳವೆ ಮಾರ್ಗ ಯೋಜನೆ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಇದರಿಂದ ದೇಶದಲ್ಲಿ ಮಹತ್ತರ ಬದಲಾವಣೆ [more]
ಫಲ್ಗುಣಿ ನದಿಗೆ ಕಟ್ಟಿರುವ ಸೇತುವೆ ಕುಸಿತ: ಕೂದಲೆಳೆ ಅಂತರದಲ್ಲಿ ಪಾರಾದ ಎರಡು ಬಸ್ ಗಳು
June 26, 2018
Samachar Network-CLB
ಉತ್ತರ ಕನ್ನಡ, ಉಡುಪಿ, ರಾಜ್ಯ, ದಕ್ಷಿಣ ಕನ್ನಡ, ಕರಾವಳಿ
Comments Off on ಫಲ್ಗುಣಿ ನದಿಗೆ ಕಟ್ಟಿರುವ ಸೇತುವೆ ಕುಸಿತ: ಕೂದಲೆಳೆ ಅಂತರದಲ್ಲಿ ಪಾರಾದ ಎರಡು ಬಸ್ ಗಳು
Seen By: 349 ಮಂಗಳೂರು: ಜೂ-26: ಮಂಗಳೂರು ಗಡಿಭಾಗದ ಮೂಲರಪಟ್ಣದಲ್ಲಿ ಫಲ್ಗುಣಿ ನದಿಗೆ ಕಟ್ಟಿರುವ ಸೇತುವೆ ಕುಸಿದುಬಿದ್ದಿದೆ. ಅದೃಷ್ಟವಶಾತ್ ಸೇತುವೆಯ ಮೇಲಿನಿಂದ ಸಾಗುತ್ತಿದ್ದ ಎರಡು ಖಾಸಗಿ ಕೂದಲೆಳೆ [more]
ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳ ವಿಶ್ವಾಸ ಅಯೋಧ್ಯೆಯಲ್ಲಿ ಮುಂದಿನ ಮೂರೂವರೆ ವರ್ಷಗಳಲ್ಲಿ ಶ್ರೀರಾಮ ಮಂದಿರ ಸಾಕಾರ
November 18, 2020
Varta Mitra News - SP
ರಾಜ್ಯ
Comments Off on ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳ ವಿಶ್ವಾಸ ಅಯೋಧ್ಯೆಯಲ್ಲಿ ಮುಂದಿನ ಮೂರೂವರೆ ವರ್ಷಗಳಲ್ಲಿ ಶ್ರೀರಾಮ ಮಂದಿರ ಸಾಕಾರ
Seen By: 34 ಮಂಗಳೂರು: ಅಯೋಧ್ಯೆಯಲ್ಲಿ ಮುಂದಿನ ಮೂರೂವರೆ ವರ್ಷಗಳಲ್ಲಿ ಶ್ರೀರಾಮಚಂದ್ರನ ಭವ್ಯ ಮಂದಿರ ಸಾಕಾರಗೊಳ್ಳುವ ವಿಶ್ವಾಸವನ್ನು ಹೊಂದಲಾಗಿದೆ ಎಂದು ಉಡುಪಿ ಪೇಜಾವರ ಮಠದ ಯತಿಗಳು ಹಾಗೂ [more]