ಹೊಸದಿಲ್ಲಿ: ದೇಶಾದ್ಯಂತ ಮಂಗಳವಾರ ಶಾಂತಿಯುತ ಭಾರತ ಬಂದ್ಗೆ ಕರೆ ನೀಡಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗ್ಗೆ 11ರಿಂದ ಮಧ್ಯಾಹ್ನ 3ಗಂಟೆಯವರೆಗೆ ಮಾತ್ರ ಬಂದ್ ನಡೆಸುವುದಾಗಿ ಭಾರತೀಯ ಕಿಸಾನ್ ಸಂಘ ತಿಳಿಸಿದೆ.
ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಕೋರಿ ಶಾಂತಿಯುತವಾಗಿ ಜನಸಾಮಾನ್ಯರಿಗೆ ಯಾವುದೇ ಬಗೆಯ ತೊಂದರೆಯಾಗದಂತೆ ಬಂದ್ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ಅವಕಾಶ ನೀಡುವುದಿಲ್ಲ ಎಂದು ಕಿಸಾನ್ ಸಂಘದ ವಕ್ತಾರ ರಾಕೇಶ್ ಟಿಕೈತ್ ಹೇಳಿದ್ದಾರೆ.
ಕೊರೋನಾ ಹಿನ್ನೆಲೆ ಕೇಂದ್ರದ ಮಾರ್ಗಸೂಚಿಯಂತೆಯೇ ಬಿಗಿ ಭದ್ರತೆಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೃಷಿ ಕಾನೂನುಗಳಿಗೆ ಸಂಬಂಸಿದಂತೆ ಕೇಂದ್ರದೊಂದಿಗೆ 6ನೇ ಸಭೆಯ ಹಿನ್ನೆಲೆ ಈ ಬಂದ್ ಮಹತ್ವ ಪಡೆದುಕೊಂಡಿದೆ.
ರೈತ ಹೋರಾಟದ ಕೇಂದ್ರಬಿಂದುವಾಗಿರುವ ರಾಷ್ಟ್ರ ರಾಜಧಾನಿಯಲ್ಲಿ ಪೆÇಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದು, ರೈತರ ಆಂದೋಲನಕ್ಕೆ ಅಡಚಣೆ ತರಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.