ಕಾಸರಗೋಡು, ಕಣ್ಣೂರು ಜಿಲ್ಲೆಗೆ ರೆಡ್ ಅಲರ್ಟ್

ಹೊಸದಿಲ್ಲಿ: ಕೇರಳದ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಜುಲೈ 11ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಶನಿವಾರ ಹವಾಮಾನ ಇಲಾಖೆ ರೆಡ್ ಅಲರ್ಟ್ ಜಾರಿಗೊಳಿಸಿದೆ.

ಭಾನುವಾರ ರಾಜ್ಯದ ಇತರೆಡೆಯೂ ಮಳೆಯಾಗುವ ನಿರೀಕ್ಷೆಯಿದ್ದು, ವಯನಾಡ್, ಕೋಜಿಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಪಾಲಕ್ಕಡ್, ತ್ರಿಶ್ಶೂರ್, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‍ನ್ನು ಇಲಾಖೆ ಘೋಷಿಸಿದೆ.

ಜುಲೈ 10ರಿಂದ 13ರವರೆಗೆ ಕೇರಳ ಕರಾವಳಿಯಾದ್ಯಂತ ಗಂಟೆಗೆ 60 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದೇ ವೇಳೆ, ಕೊಟ್ಟಾಯಂ, ಇಡುಕ್ಕಿ, ಮಲಪ್ಪುರಂ, ಕೋಜಿಕೋಡ್ ಮತ್ತು ಕಣ್ಣೂರು ಜಿಲ್ಲೆಗಳಿಗೆ ಶನಿವಾರ ಆರೆಂಜ್ ಅಲರ್ಟ್, ನೀಡಲಾಗಿದ್ದು, ತಿರುವನಂತಪುರಂ, ಕೊಲ್ಲಂ ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್‍ನ್ನು ಜಾರಿಗೊಳಿಸಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ