ಬೆಂಗಳೂರು, ಏ.7- ಕೌಟುಂಬಿಕ ಕಲಹದಿಂದ ನೊಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಡುಗೋಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾಡುಗೋಡಿಯ ಚಿಕ್ಕಬಾನಹಳ್ಳಿಯ ರಮೇಶ್ (35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಕಾರು ಚಾಲಕ ವೃತ್ತಿ ಮಾಡುತ್ತಿದ್ದ ರಮೇಶ್ ದಂಪತಿ ನಡುವೆ ಕೌಟುಂಬಿಕ ವಿಚಾರವಾಗಿ ಆಗಿಂದಾಗ್ಗೆ ಜಗಳ ನಡೆದಿದ್ದು, ನಿನ್ನೆಯೂ ನಡೆದ ಜಗಳದಿಂದಾಗಿ ನೊಂದು ರಾತ್ರಿ ರಮೇಶ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸುದ್ದಿ ತಿಳಿದ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ವೈದೇಹಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.