ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಟಿಕೆಟ್ ಕೈತಪ್ಪಿದವರ ತೀವ್ರಗೊಂಡ ಅಸಮಾಧಾನ

ಬೆಂಗಳೂರು:ಏ-9: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಪಕ್ಷದಲ್ಲಿ ಅಸಮಾಧಾನ ತೀವ್ರಗೊಂಡಿದೆ. ಚಿಕ್ಕಪೇಟೆ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಬಿಬಿಎಂಪಿ ಮಾಜಿ ಪ್ರತಿಪಕ್ಷದ ನಾಯಕ, ಬಿಜೆಪಿ ವಕ್ತಾರ ಎನ್‌.ಆರ್‌. ರಮೇಶ್‌ ಬೆಂಬಲಿಗರು ಪಕ್ಷದ ವರಿಷ್ಠರ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲ ಪಟ್ಟಿಯಲ್ಲಿ ಚಿಕ್ಕಪೇಟೆ ಕ್ಷೇತ್ರಕ್ಕೆ ಎನ್.ಆರ್. ರಮೇಶ್‌ ಬದಲು ಉದಯ್‌ ಗರುಡಾಚಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ಬೇಸರಗೊಂಡ ರಮೇಶ್ ಬೆಂಬಲಿಗರು ತಡರಾತ್ರಿ ಜಯನಗರದಲ್ಲಿರುವ ಮಾಜಿ ಡಿಸಿಎಂ ಆರ್. ಅಶೋಕ್ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಆರ್. ಅಶೋಕ್ ಮತ್ತು ಕೇಂದ್ರ ಸಚಿವ ಅನಂತಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಕೈತಪ್ಪಿರುವ ಎನ್ .ಆರ್. ರಮೇಶ್ ಅವರು ತಮ್ಮ ಮುಂದಿನ ನಿಲುವನ್ನು ತಿಳಿಸಲು ಇಂದು ಮಧ್ಯಾಹ್ನ 12 ಗಂಟೆಗೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ಕರೆದಿದ್ದಾರೆ. ಅದೇ ರೀತಿ ಬಸವನಗುಡಿ ಕ್ಷೇತ್ರದಲ್ಲಿ ರವಿ ಸುಬ್ರಹ್ಮಣ್ಯ ಅವರಿಗೆ ಮತ್ತೆ ಟಿಕೆಟ್ ಘೋಷಿಸಿರುವುದರಿಂದ ಎರಡು ಬಾರಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕಟ್ಟೆ ಸತ್ಯನಾರಾಯಣ ಅವರು ಸಹ ಅಸಮಧಾನಗೊಂಡಿದ್ದಾರೆ ಎನ್ನಲಾಗಿದೆ.

Assembly Elections 2018,NR Ramesh, katte satyanarayana,protest against BJP senior leaders.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ