ಟೋಕಿಯೊ, ಏ.9-ಪಶ್ಚಿಮ ಜಪಾನ್ನಲ್ಲಿ ಇಂದು ಮುಂಜಾನೆ ಸಂಭವಿಸಿದ ಭೂಕಂಪದಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಕಟ್ಟಡಗಳು ಮತ್ತು ರಸ್ತೆಗಳಿಗೆ ಹಾನಿಯಾಗಿವೆ. ಮತ್ತೆ ಪ್ರಬಲ ಭೂಕಂಪ ಸಂಭವಿಸುವ ಸಾಧ್ಯತೆ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಜಪಾನ್ ಭೂಗರ್ಭ ಅಧ್ಯಯನ ಸಂಸ್ಥೆಯ ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1ರಷ್ಟಿತ್ತು. ಆದರೆ ಅಮೆರಿಕದ ಭೂವಿಜ್ಞಾನ ಸರ್ವೇಕ್ಷಣಾಲಯದ ಪ್ರಕಾರ 5.6ರಷ್ಟು.
ಹಿರೋಶಿಮಾದ ಉತ್ತರಕ್ಕೆ 96 ಕಿ.ಮೀ. ದೂರವಿರುದ ಹೊನ್ಶು ಮುಖ್ಯ ದ್ವೀಪದ ಪಶ್ಚಿಮ ಭಾಗದಲ್ಲಿ ಇಂದು 1.32ರ ನಸುಕಿನಲ್ಲಿ ಭೂಕಂಪ ಸಂಭವಿಸಿತು. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಕಟ್ಟಡಗಳು ಮತ್ತು ರಸ್ತೆಗಳಿಗೆ ಹಾನಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.