ಶ್ರೀನಗರ, ಏ.11-ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಘರ್ಷಣೆಯಲ್ಲಿ ಇಬ್ಬರು ನಾಗರಿಕರು ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ಕುಲ್ಗಾಂನ ಖುದ್ವನಿ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಖಚಿತ ಸುಳಿವನ್ನು ಆಧರಿಸಿ ನಿನ್ನೆ ರಾತ್ರಿಯಿಂದ ಭದ್ರತಾ ಪಡೆಗಳು ಜಾಲಾಡುತ್ತಿದ್ದಾಗ ಮರೆಯಲ್ಲಿದ್ದ ಉಗ್ರರು ಗುಂಡಿನ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಕೆಲವು ಯೋಧರು ಗಾಯಗೊಂಡರು. ಗುಂಡಿನ ಕಾಳಗದ ನಂತರ ಉಗ್ರರು ಕತ್ತಲಲ್ಲಿ ಪರಾರಿಯಾಗಿದ್ದಾರೆ.
ತೀವ್ರ ಗಾಯಗೊಂಡ ಯೋಧರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಈ ಘಟನೆ ನಂತರ ಗುಂಪೆÇಂದು ಭದ್ರತಾಪಡೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಘರ್ಷಣೆ ನಡೆದು ಇಬ್ಬರು ನಾಗರಿಕರು ಬಲಿಯಾಗಿ, ಕೆಲವು ಮಂದಿ ಗಾಯಗೊಂಡಿದ್ದಾರೆ.
ಪರಾರಿಯಾಗಿರುವ ಉಗ್ರರಿಗಾಗಿ ಆ ಪ್ರದೇಶದಲ್ಲಿ ಶೋಧ ಕಾರ್ಯ ಮುಂದುವರಿದಿದೆ.