ಸಿ.ಪಿ.ಯೋಗೇಶ್ವರ್ ವಿರುದ್ಧ ಸಾರಿಗೆ ಸಚಿವ ಎಚ್.ಎಂ.ರೇವಣ್ಣರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ

 

ಬೆಂಗಳೂರು, ಏ.11-ಸಿ.ಪಿ.ಯೋಗೇಶ್ವರ್ ವಿರುದ್ಧ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ರೇವಣ್ಣ ಅವರು ಈ ಬಾರಿ ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಮೂಲಕ ಯೋಗೇಶ್ವರ್‍ಗೆ ಪ್ರಬಲ ಸ್ಪರ್ಧೆ ಒಡ್ಡಲಿದ್ದಾರೆ.
ಚನ್ನಪಟ್ಟಣದಲ್ಲಿ ರೇವಣ್ಣ ಅವರನ್ನು ನಿಲ್ಲಿಸಲು ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಸಹೋದರರು ಸಮ್ಮತಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್‍ನಲ್ಲೇ ಇದ್ದು, ಪಕ್ಷಾಂತರವಾಗಿ ಕಾಂಗ್ರೆಸ್ ವಿರುದ್ಧವೇ ಹರಿಹಾಯ್ದಿದ್ದ ಸಿ.ಪಿ.ಯೋಗೇಶ್ವರ್‍ಗೆ ಮಣಿಸಲು ಕಾಂಗ್ರೆಸ್ ಎಲ್ಲಾ ರೀತಿಯಲ್ಲಿ ತಂತ್ರ ಹೆಣೆದಿದ್ದು, ಅದರಂತೆ ಪ್ರಬಲ ಪೈಪೆÇೀಟಿ ನೀಡಲು ಈ ಲೆಕ್ಕಾಚಾರ ಅನುಸರಿಸಲಾಗುತ್ತಿದೆ.
ಚನ್ನಪಟ್ಟಣದಲ್ಲೇ ಜೆಡಿಎಸ್‍ನಿಂದ ಎಚ್.ಡಿ.ಕುಮಾರಸ್ವಾಮಿ ಸಹ ಸ್ಪರ್ಧಿಸುವ ಸಾಧ್ಯತೆ ಇದ್ದು, ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ವಿರುದ್ಧ ಪ್ರಬಲ ಪ್ರತಿಸ್ಪರ್ಧಿಯಾಗಿ ರೇವಣ್ಣ ಸೂಕ್ತ ಅಭ್ಯರ್ಥಿ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ.
ಈ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ ಘಟಾನುಘಟಿಗಳ ಸ್ಪರ್ಧೆಯಿಂದ ದೊಡ್ಡ ಸ್ಪರ್ಧೆಯೇ ಏರ್ಪಡುವ ಸಾಧ್ಯತೆ ಇದೆ.

ರೇವಣ್ಣಗೆ ಉಸ್ತುವಾರಿ:
ಇಂದು ಬೆಳಗ್ಗೆ ಎಚ್.ಎಂ.ರೇವಣ್ಣ ಅವರೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಚನ್ನಪಟ್ಟಣದಲ್ಲಿ ಸ್ಪರ್ಧಿಸಿ ಕಾಂಗ್ರೆಸ್‍ನ್ನು ಗೆಲ್ಲಿಸುವ ಹಾಗೂ ಬಾದಾಮಿಯಲ್ಲಿ ಸ್ಪರ್ಧಿಸಲಿರುವ ಮುಖ್ಯಮಂತ್ರಿಯನ್ನು ಗೆಲ್ಲಿಸಿಕೊಂಡು ಬರುವ ಉಸ್ತುವಾರಿಯನ್ನು ವಹಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ್ತು ಬಾದಾಮಿಯಲ್ಲಿ ಸ್ಪರ್ಧಿಸುತ್ತಿರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೆಲುವಿಗೂ ಎಲ್ಲಾ ರೀತಿಯ ಜವಾಬ್ದಾರಿ ಹೊತ್ತು ಉಸ್ತುವಾರಿ ನಿರ್ವಹಿಸಲು ರೇವಣ್ಣಗೆ ವಹಿಸಲಾಗಿದೆ.
ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಉಸ್ತುವಾರಿ ನಾಯಕನಾಗಿ ಕಾರ್ಯನಿರ್ವಹಿಸಿ ಪಕ್ಷದ ಗೆಲುವಿಗೆ ಎಲ್ಲಾ ರೀತಿಯಲ್ಲೂ ಕಾರ್ಯತಂತ್ರ ರೂಪಿಸಲು ನಿಯೋಜಿಸಲಾಗಿದೆ ಎಂದು ಹೇಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ