ಮೈಸೂರು, ಏ.12-ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಸಂಭವನೀಯ ಬಿಜೆಪಿ ಅಭ್ಯರ್ಥಿ ವಿಜಯೇಂದ್ರ ಅವರು ವರುಣಾ ಕ್ಷೇತ್ರದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ.
ಈ ಮನೆಯಲ್ಲಿ ಇಂದು ಬೆಳಗ್ಗೆ ಹೋಮ ಹವನ ನಡೆಸಿ ಗೃಹ ಪ್ರವೇಶ ಮಾಡಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲೇ ವಾಸವಿದ್ದು ಪ್ರಚಾರ ಕಾರ್ಯವನ್ನು ನಡೆಸುವ ಉದ್ದೇಶದಿಂದ ಮನೆಯನ್ನು ಬಾಡಿಗೆಗೆ ಪಡೆದಿದ್ದಾರೆ ಎನ್ನಲಾಗಿದೆ.
ಪ್ರತಿ ದಿನ ಶಿವಮೊಗ್ಗದಿಂದ ಮೈಸೂರಿಗೆ ಬಂದು ಪ್ರಚಾರ ಮಾಡಲು ತೊಂದರೆಯಾಗುವ ಹಿನ್ನೆಲೆಯಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ವಾಸ್ತವ್ಯ ಹೂಡಿದ್ದಾರೆ.
ಹಾಗಾಗಿ ವಿಜಯೇಂದ್ರ ವರುಣಾ ಕ್ಷೇತ್ರಗಳ ಪ್ರತಿ ಗ್ರಾಮದ ಮನೆ ಮನೆಗೂ ತೆರಳಿ ಬಿಜೆಪಿ ಪರ ಪ್ರಚಾರ ಮಾಡಿ ಮತ ಬೇಟೆ ನಡೆಸುತ್ತಿದ್ದಾರೆ.