ಥಾಣೆ, ಏ.12-ಥಾಣೆ, ಪಲ್ಘರ್ ಮತ್ತು ಮುಂಬೈಗಳಲ್ಲಿ ಮಹಿಳೆಯರನ್ನು ಬೆಚ್ಚಿ ಬೀಳಿಸಿದ್ದ 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ಸರಗಳ್ಳನನ್ನು ಬಂಧಿಸಿರುವ ಪೆÇಲೀಸರು ಲಕ್ಷಾಂತರ ರೂ.ಗಳ ಮೌಲ್ಯದ ಚಿನ್ನಾಭರಣಗಳು ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಕುಖ್ಯಾತ ಸರಗಳ್ಳ ಪ್ರದೀಪ್ ಬ್ಯಾನರ್ಜಿ(40)ಯನ್ನು ಕಾಶಿಮಿರಾ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ನೀಡಿದ ಮಾಹಿತಿ ಮೇರೆಗೆ ಕದ್ದ ಮಾಲುಗಳನ್ನು ಮಾರಾಟ ಮಾಡಲು ಸಹಕರಿಸುತ್ತಿದ್ದ ಆತನ ಪತ್ನಿ ಮತ್ತು ಅವುಗಳನ್ನು ಖರೀದಿಸುತ್ತಿದ್ದ ವ್ಯಕ್ತಿಯನ್ನೂ ಸಹ ಬಂಧಿಸಲಾಗಿದೆ ಎಂದು ಪೆÇಲೀಸ್ ವರಿಷ್ಠಾಧಿಕಾರಿ ಮಹೇಶ್ ಪಾಟೀಲ್ ತಿಳಿಸಿದ್ದಾರೆ.
ವಿಚಾರಣೆ ವೇಳೆ ತಾನು ಈ ವರ್ಷ ಜನವರಿಯಿಂದ ಥಾಣೆ, ಫಲ್ಛರ್ ಮತ್ತು ಮುಂಬೈ ಈ ಮೂರು ಜಿಲ್ಲೆಗಳಲ್ಲಿ 50ಕ್ಕೂ ಹೆಚ್ಚು ಸರಗಳ್ಳತನ ಕೃತ್ಯಗಳನ್ನು ನಡೆಸಿರುವುದಾಗಿ ಆತ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.