ಶಾಂತಿಯುತ ಚುನಾವಣೆಗಾಗಿ ಪೊಲೀಸ್ ಇಲಾಖೆ ಇಂದು ಬೆಳಗ್ಗೆ ರೌಡಿಗಳ ಪರೇಡ್ ನಡೆಸಿತು

ಮಂಡ್ಯ,ಏ.12- ಶಾಂತಿಯುತ ಚುನಾವಣೆಗಾಗಿ ಪೊಲೀಸ್ ಇಲಾಖೆ ಹಲವು ರೀತಿಯ ಸಿದ್ದತೆ ಮಾಡಿಕೊಂಡಿದ್ದು ಅದರ ಭಾಗವಾಗಿ ಇಂದು ಬೆಳಗ್ಗೆ ರೌಡಿಗಳ ಪರೇಡ್ ನಡೆಸಿತು.

ಮಂಡ್ಯನಗರ ಸೇರಿದಂತೆ ವಿವಿಧ ಠಾಣೆಗಳ ರೌಡಿಗಳನ್ನು ಕರಿಸಿ ಶಾಂತಿ ಕದಡದಂತೆ ನಡೆದುಕೊಳ್ಳಬೇಕೆಂದು ಹಿರಿಯ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದರು.

ಮತ್ತೊಂದೆಡೆ ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಮಂಡ್ಯ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣದಲ್ಲಿ ಕೇಂದ್ರ ಅರೆ ಮೀಸಲು ಪಡೆಯಿಂದ ಪಥ ಸಂಚಲನ ಮಾಡಿ ಶಾಂತಿಯುತ ಚುನಾವಣೆಗೆ ತಯಾರಿ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ