ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂಬಂಧ ಬಿಜೆಪಿ ಶಾಸಕ ಕುಲ್‍ದೀಪ್ ಸಿಂಗ್ ಸೆಂಗರ್ ವಿರುದ್ಧ ಎಫ್‍ಐಆರ್:

ಲಕ್ನೋ, ಏ.12-ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ 17 ವರ್ಷದ ಹುಡುಗಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂಬಂಧ ಬಿಜೆಪಿ ಶಾಸಕ ಕುಲ್‍ದೀಪ್ ಸಿಂಗ್ ಸೆಂಗರ್ ವಿರುದ್ಧ ಪೆÇಲೀಸರು ಇಂದು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.
ಆರೋಪಿ ಶಾಸಕನ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೆÇೀಕ್ಸೋ) ಕಾಯ್ದೆಯ ವಿವಿಧ ಕಲಂಗಳ ಅಡಿ ದೂರು ದಾಖಲಾಗಿದೆ ಎಂದು ಉನ್ನಾವೋ ಪೆÇಲೀಸ್ ವರಿಷ್ಠಾಧಿಕಾರಿ ಪುಷ್ಪಾಂಜಲಿ ದೇವಿ ತಿಳಿಸಿದ್ದಾರೆ.
ಅತ್ಯಾಚಾರ, ಅಪಹರಣ, ಕ್ರಿಮಿನಲ್ ಬೆದರಿಕೆ ಇತ್ಯಾದಿ ಕಲಂಗಳ ಅಡಿ ಮಖಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಈ ಕೃತ್ಯದಲ್ಲಿ ಶಾಮೀಲಾಗಿದ್ದ ಶಾಸಕರ ಸಹೋದರನನ್ನು ಈಗಾಗಲೇ ಪೆÇಲೀಸರು ಬಂಧಿಸಿದ್ಧಾರೆ.  ತನ್ನ ಮಗಳ ಮೇಲೆ ಶಾಸಕ ಮತ್ತು ಆತನ ಸಹೋದರರು ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿಯ ತಂದೆ ಪೆÇಲೀಸರಿಗೆ ದೂರು ನೀಡಿ ಪ್ರತಿಭಟನೆ ನಡೆಸಿದ್ದರು. ಆಕೆಯ ತಂದೆ ಪೆÇಲೀಸ್ ಕಸ್ಟಡಿಯಲ್ಲಿ ನಿಗೂಢವಾಗಿ ಸಾವನ್ನಪಿದ್ದರು. ಈ ಎರಡೂ ಪ್ರಕರಣಗಳ ಬಗ್ಗೆ ಈಗಾಗಲೇ ವಿಶೇಷ ತನಿಖಾ ತಂಡದಿಂದ(ಎಸ್‍ಐಟಿ) ತನಿಖೆಗೆ ಆದೇಶಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ