ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಮಹೇಶ್ ಬೇಗೂರು

 

ಬೆಂಗಳೂರು, ಏ.13-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಮಹೇಶ್ ಬೇಗೂರು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳ ಪರಿಪೂರ್ಣ ಪರಿಚಯವೇ ನನ್ನ ಗೆಲುವಿನ ಶಕ್ತಿ ಎಂದ ಅವರು, ಮಧ್ಯಮವರ್ಗದ ಜನರ ಜತೆ ಬೆರೆತು ಜಾತಿ-ಮತ-ಭೇದವಿಲ್ಲದೆ ಎಲ್ಲರ ಸರ್ವತೋಮುಖ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ಮೂಲಭೂತ ಸೌಕರ್ಯ ಒದಗಿಸಲು ಶ್ರಮಿಸುತ್ತೇನೆ ಎಂದರು.

ಕನ್ನಡಪರ ಸಂಘಟನೆಗಳ ಒಕ್ಕೂಟದೊಂದಿಗೆ ಕನ್ನಡ ಲಲಿತ ಕಲಿಕಾ ಕೇಂದ್ರಗಳ ಸ್ಥಾಪನೆ, ಕನ್ನಡಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು, ಕೆರೆಕಟ್ಟೆಗಳ ಅಂತರ್ಜಲ ವೃದ್ಧಿಗೆ ಶ್ರಮಿಸುವುದು, ವಿಷಯುಕ್ತ ನೀರಿನ ಶುದ್ಧೀಕರಣ ಘಟಕಗಳ ಸ್ಥಾಪನೆ, ಕೆರೆಗಳ ಪುನರುಜ್ಜೀವನಗೊಳಿಸುವುದು, ಗ್ರಾ.ಪಂ. ವ್ಯಾಪ್ತಿಯಲ್ಲಿ ಉದ್ಯಾನವನ ನಿರ್ಮಾಣ, ಉಚಿತ ಸಾರ್ವಜನಿಕ ಗ್ರಂಥಾಲಯ ಮತ್ತು ಶೌಚಾಲಯಗಳ ನಿರ್ಮಾಣ, ಮಹಿಳಾ ದೌರ್ಜನ್ಯ ತಡೆ, ಮಹಿಳಾ ರಕ್ಷಣೆ, ಉಚಿತ ಶಿಕ್ಷಣಕ್ಕೆ ನೆರವು, ಮಹಿಳಾ ಜಾಗೃತಿ ಕಾರ್ಯಕ್ರಮಗಳು ಸೇರಿದಂತೆ ಹಲವಾರು ಕಾರ್ಯಕ್ರಮ ನಡೆಸಿ ಆ ಮೂಲಕ ಜನರ ವಿಶ್ವಾಸ ಗಳಿಸುವುದಾಗಿ ಭರವಸೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ