ನೆಲಮಂಗಲ, ಏ.13-ಬೈಕ್‍ಗಳಲ್ಲಿ ಸುತ್ತಾಡುತ್ತಾ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಬಂಧಿಸಿ ಹಲವು ಪ್ರಕರಣಗಳನ್ನು ಬಯಲಿಗೆಳೆಯುವಲ್ಲಿ ನೆಲಮಂಗಲ ಪಟ್ಟಣ ಠಾಣೆ ಪೆÇಲೀಸರು ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್, ರಾತ್ರಿ ನೆಲಮಂಗಲದ ಅರಿಶಿನಕುಂಟೆ ವ್ಯಾಪ್ತಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ವಿನೋದ್ (21), ವಿಜಯ್ (19), ಶಿವರಾಜ್(19), ಅನಿಲ್ (19)ನನ್ನು ಬಂಧಿಸಲಾಗಿದೆ.
ಆರೋಪಿಗಳಿಂದ 3.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 2 ಡಿಯೋ ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ಈ ನಾಲ್ವರು 2 ಡಿಯೋ ಬೈಕ್‍ಗಳಲ್ಲಿ ಸುತ್ತಾಡುತ್ತಾ ರಾತ್ರಿ ವೇಳೆ ಓಡಾಡುವ ವಾಹನ ಸವಾರರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಅವರಿಂದ ಹಣ, ಆಭರಣ ಸುಲಿಗೆ ಮಾಡುತ್ತಿದ್ದುದು ವಿಚಾರಣೆಯಿಂದ ತಿಳಿದುಬಂದಿದೆ. ಇವರೆಲ್ಲರೂ ಬೆಂಗಳೂರಿನ ಸುತ್ತಮುತ್ತಲಿನ ನಿವಾಸಿಗಳು ಎಂದು ಅವರು ಹೇಳಿದರು.
ರಾತ್ರಿ ಅರಿಶಿನಕುಂಟೆ ವ್ಯಾಪ್ತಿಯಲ್ಲಿ ನಮ್ಮ ಪೆÇಲೀಸರು ಗಸ್ತಿನಲ್ಲಿದ್ದಾಗ ಈ ನಾಲ್ವರು ಎರಡು ಬೈಕ್‍ಗಳಲ್ಲಿ ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದಾಗ ಅವರನ್ನು ತಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿವರಿಸಿದರು.
ಕಳೆದ ಹತ್ತು ದಿನಗಳ ಹಿಂದೆ ನೆಲಮಂಗಲ ವ್ಯಾಪ್ತಿಯ ಶಿವಾಜಿನಗರದಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬರಿಗೆ ಮಚ್ಚು ತೋರಿಸಿ ಬೆದರಿಸಿ ಸಾರ್ವಜನಿಕರ ಮುಂದೆಯೇ ಹಲ್ಲೆ ನಡೆಸಿ ಎರಡು ಸರ ಹಾಗೂ ಎರಡು ಉಂಗುರಗಳನ್ನು ದೋಚಿದ್ದ ಪ್ರಕರಣದಲ್ಲಿ ಈ ನಾಲ್ವರು ಯುವಕರು ಭಾಗಿಯಾಗಿರುವುದು ವಿಚಾರಣೆಯಿಂದ ತಿಳಿದುಬಂದಿದೆ.
ಹನಿಟ್ರ್ಯಾಪ್‍ನಲ್ಲೂ ಭಾಗಿ: ನೆಲಮಂಗಲದ ಶಿವಾಜಿನಗರದಲ್ಲಿ ಮಹಿಳೆಯೊಬ್ಬರು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಮಹಿಳೆ 18 ರಿಂದ 25 ವರ್ಷದೊಳಗಿನ ಯುವಕರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮೂಲಕ ಶ್ರೀಮಂತರಿಂದ ಹಣ, ಆಭರಣ ದೋಚುತ್ತಿರುವ ಪ್ರಕರಣದಲ್ಲಿ ಈ ಯುವಕರು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ತಲೆ ಮರೆಸಿಕೊಂಡಿರುವ ಮಹಿಳೆಗಾಗಿ ತನಿಖೆ ನಡೆಯುತ್ತಿದೆ. ಈ ಮಹಿಳೆ ಪತ್ತೆಯಾದರೆ ಇನ್ನಷ್ಟು ದರೋಡೆ ಪ್ರಕರಣಗಳು ಬಯಲಿಗೆ ಬರಲಿದೆ ಎಂದು ಅವರು ಹೇಳಿದರು.
ಪ್ರಶಂಸೆ: ನಾಲ್ವರು ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ಡಿವೈಎಸ್ಪಿ ರಾಜೇಂದ್ರಕುಮಾರ್, ಸಿಪಿಐ ಶಿವಣ್ಣ, ಪಿಎಸ್‍ಐ ಯು.ಆರ್.ಮಂಜುನಾಥ್ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ನಗರ ಪೆÇಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಪ್ರಶಂಸಿಸಿದ್ದಾರೆ.