ಇಂದು ರಾಷ್ಟ್ರೀಯ ಮತದಾರರ ದಿನಾಚರಣೆ

Varta Mitra News

ಬಾಗಲಕೋಟೆ:  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‍ನಲ್ಲಿ ಜರಗುವ ಕಾರ್ಯಕ್ರಮವನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಂತೋಷ ಸಿ.ಬಿ. ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್, ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಲ್.ಹೊನೋಲೆ, ಅತಿಥಿಗಳಾಗಿ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ ಭಾಗವಹಿಸಲಿದ್ದಾರೆ. ಎಸ್.ಸಿ.ನಂದಿಮಠ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಬಸವರಾಜ ಕುಬಕಡ್ಡಿ ಅತಿಥಿ ಉಪನ್ಯಾಸ ನೀಡುವರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ