ತ್ರಿಪುರಾ ವಿಧಾನಸಭಾ ಚುನಾವಣೆ: 59 ಕ್ಷೇತ್ರಗಳಲ್ಲಿ ಮತದಾನ ಆರಂಭ

ತ್ರಿಪುರಾ: ಫೆ-18: ಈಶಾನ್ಯ ರಾಜ್ಯವಾದ ತ್ರಿಪುರಾ ವಿಧಾನಸಭೆಯ 60 ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದೆ.

ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿರುವ ಮತದಾನ ಸಂಜೆ 4ಗಂಟೆವರೆಗೂ ನಡೆಯಲಿದೆ. ಮತದಾರರು ಬೆಳಗ್ಗಿನಿಂದಲೇ ಮತಗಟ್ಟೆಗಳಿಗೆ ಬಂದು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 3,214 ಮತಗಟ್ಟೆಗಳಲ್ಲಿ ಜನರು ಮತದಾನ ಮಾಡುತ್ತಿದ್ದಾರೆ.

ಭಾರತೀಯ ಜನತಾ ಪಾರ್ಟಿ, ಆಡಳಿತಾರೂಢ ಎಡರಂಗದ ಮತ್ತು ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ. ಇಂದಿನ ಚುನಾವಣೆಯಲ್ಲಿ 23 ಮಹಿಳೆಯರು ಸೇರಿದಂತೆ 292 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಕಳೆದ 25 ವರ್ಷಗಳಿಂದ ಇಲ್ಲಿ ಆಳ್ವಿಕೆ ನಡೆಸುತ್ತಿರುವ ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯಲು ಬಿಜೆಪಿ ಮತ್ತು ಕಾಂಗ್ರೆಸ್ ಶತಾಯಗತಾಯ ಪ್ರಯತ್ನ ಮಾಡುತ್ತಿವೆ.
ಬಿಜೆಪಿ 51 ಸ್ಥಾನಗಳಲ್ಲಿ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಐಪಿಎಫ್ ಟಿ 9 ಸ್ಥಾನಗಳಲ್ಲಿ, ಸಿಪಿಎಂ 57 ಸ್ಥಾನಗಳಲ್ಲಿ ಹಾಗೂ ಅದರ ಮೈತ್ರಿ ಪಕ್ಷಗಳಿಗೆ 2 ಸೀಟು ಬಿಟ್ಟುಕೊಟ್ಟರೆ ಕಾಂಗ್ರೆಸ್ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ.

ಸಿಪಿಎಂ ಅಭ್ಯರ್ಥಿ ರಮೇಂದ್ರ ನಾರಾಯಣ್ ದೆಬ್ಬರ್ಮ ಅವರ ನಿಧನದಿಂದ ಚಾರಿಲಮ್ ಕ್ಷೇತ್ರದಲ್ಲಿ ಇಂದಿನ ಮತದಾನವನ್ನು ಮುಂದೂಡಲಾಗಿದೆ. ಮಾರ್ಚ್ 12ರಂದು ಇಲ್ಲಿ ಮತದಾನ ನಡೆಯಲಿದೆ. ತ್ರಿಪುರಾ ಚುನಾವಣೆ ಫಲಿತಾಂಶ ಮಾರ್ಚ್ 3ರಂದು ಹೊರಬೀಳಲಿದೆ.

Tripura, Assembly Election,Voting in 59 seats

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ