ಕೆ ಎಸ್ ಪುಟ್ಟಣ್ಣಯ್ಯ ನಿಧನ ಅತೀವ ನೋವು ತಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಫೆ-೧೯: ರೈತ ಮುಖಂಡ, ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಪುಟ್ಟಣ್ಣಯ್ಯ ಅವರ ಸಾವಿನ ಸುದ್ದಿ ದಿಗ್ಭ್ರಮೆ ಉಂಟು ಮಾಡಿದೆ ಎಂದು ಹೇಳಿದ್ದಾರೆ.

ಬಹುಕಾಲದ ಸ್ನೇಹಿತನ ಅಗಲಿಕೆ ನನಗೆ ಅತೀವ ನೋವು ತಂದಿದೆ. ರೈತ ಸಂಘ ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ ಎಂದು ಹೇಳಿದರು.

ಇದೇವೇಳೆ ಕುರುಬೂರು ಶಾಂತಕುಮಾರ್ ಮಾತನಾಡಿ, ರಾಜ್ಯದ ರೈತರ ಪಾಲಿಗೆ ತುಂಬಲಾರದ ನಷ್ಟವಾಗಿದೆ. ಕೆ.ಎಸ್.ಪುಟ್ಟಣ್ಣಯ್ಯನವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದರು.

ಸಚಿವ ಮಹದೇವಪ್ಪ ಕೂಡ ಕೆ.ಎಸ್.ಪುಟ್ಟಣ್ಣಯ್ಯ ನಿಧನಕ್ಕೆ ಸಂತಾಪ ಸೂಚಿಸಿದ್ದು, ರೈತರ ಮುಖಂಡರಾಗಿ ರೈತರ ಪರವಾಗಿ ಹಲವಾರು ಹೋರಾಟ ಮಾಡಿದ್ದಾರೆ. ಬಡವರ, ಮಹಿಳೆಯರ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾದ ನಷ್ಟ ಉಂಟಾಗಿದೆ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.

K S Puttannaiah passes away,cm siddaramaiah, condolence

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ