ಸಿಎಂ ಮನೋಹರ್ ಪರಿಕ್ಕರ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ: ವದಂತಿಗಳಿಗೆ ತೆರೆ ಎಳೆದ ಆಸ್ಪತ್ರೆ ವೈದ್ಯರು

ಮುಂಬೈ:ಫೆ-೧೯: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಆರೋಗ್ಯವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮುಂಬೈನ ಲೀಲಾವತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಸಿಎಂ ಮನೋಹರ್ ಪರಿಕ್ಕರ್ ಅವರು ಆರೋಗ್ಯವಾಗಿದ್ದು, ಸಾಮಾನ್ಯ ಚೆಕ್ ಅಪ್ ಗಾಗಿ ಆಸ್ಪತ್ರೆಗೆ ಆಗಮಿಸಿದ್ದಾರೆ. ಚಿಕಿತ್ಸೆಗೆ ಉತ್ತಮವಾದಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಇನ್ನು ಮುಂಬೈಗೆ ಆಗಮಿಸುವುದಕ್ಕೂ ಮುನ್ನ ಪರಿಕ್ಕರ್ ಅವರು ಹೊಟ್ಟೆನೋವಿನಿಂದ ಬಳಲಿ ಗೋವಾದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಪರಿಕ್ಕರ್ ಕಳೆದ ಗುರುವಾರ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಕುರಿತು ಕೆಲ ಮಾಧ್ಯಮಗಳು ಪರಿಕ್ಕರ್ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂಬ ವರದಿ ಮಾಡಿದ್ದವು. ಈ ಹಿನ್ನಲೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಲೀಲಾವತಿ ಆಸ್ಪತ್ರೆ ವೈದ್ಯರು ಎಲ್ಲ ಊಹೋಪೋಹಗಳಿಗೆ ತೆರೆ ಎಳೆದಿದ್ದಾರೆ.

Manohar Parrikar, Responding Well to Treatment,Lilavati Hospital

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ