ಉಗ್ರರ ಅಡಗುದಾಣ ಧ್ವಂಸ ಮಾಡಿದ ಸೇನೆ: ಶಸ್ತ್ರಾಸ್ತ್ರ ವಶ

ಶ್ರೀನಗರ: ಕಣಿವ ರಾಜ್ಯದಲ್ಲಿ ಭಯೋತ್ಪಾದಕರ ಹುಟ್ಟಡಗಿಸುತ್ತಿರುವ ಭದ್ರತಾ ಪಡೆಗಳು, ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಕುಪ್ವಾರದಲ್ಲಿನ ಉಗ್ರರ ಅಡಗುದಾಣಗಳನ್ನು ಧ್ವಂಸ ಮಾಡಿದ್ದಾರೆ.

ಕುಪ್ವಾರದ ಲಷ್ತಿಯಾಲ್ ಗ್ರಾಮದ ಅರಣ್ಯ ಪ್ರದೇಶದಲ್ಲಿದ್ದ ಉಗ್ರರ ಅಡಗುದಾಣವನ್ನು ಸೈನಿಕರು ಮಂಗಳವಾರ ಧ್ವಂಸ ಮಾಡಿದ್ದಾರೆ. ಈ ವೇಳೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಬರೊಬ್ಬರಿ 2 ಕೆಜಿಯಷ್ಟು  ಸುಧಾರಿತ ಸ್ಫೋಟಕ, ಮೂರು ಯುಬಿಜಿಎಲ್ ಶೆಲ್ ಗಳು, 15 ಸುತ್ತು ಜೀವಂತ ಗುಂಡುಗಳಿದ್ದ ಪಿಸ್ತೂಲ್, 335 ಸುತ್ತು ಜೀವಂತ ಗುಂಡುಗಳ ಸಹಿತ ಎಕೆ 47 ಗನ್, 7 ಡಿಟೋನೇಟರ್ ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಸಿಆರ್ ಪಿಎಫ್ ಅಧಿಕಾರಿಗಳಿಗೆ ದೊರೆತ ಖಚಿತ ಮಾಹಿತಿ ಮೇರೆಗೆ 41 ರಾಷ್ಟ್ರೀಯ ರೈಫಲ್ಸ್ ನೆರವಿನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಪ್ವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಅವಿತಿರುವ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

 

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ