ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ವಿಧ್ವತ್ ನನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಪವರ್ ಸ್ಟಾರ್

ಬೆಂಗಳೂರು:ಫೆ-20:ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್ ನನ್ನು ಭೇಟಿಯಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಆರೋಗ್ಯ ವಿಚಾರಿಸಿದ್ದಾರೆ.

ಮೊಹಮ್ಮದ್ ನಲಪಾಡ್ ಗ್ಯಾಂಗ್ ನಿಂದ ತೀವ್ರ ಹಲ್ಲೆಗೊಳಗಾಗಿದ್ದ ವಿದ್ವತ್ ಫೆಬ್ರವರಿ 17ರಿಂದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ವತ್ ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಗುರು ರಾಜಕುಮಾರ್ ಆಪ್ತ ಸ್ನೇಹಿತರಾಗಿದ್ದರಿಂದ ಪುನೀರ್ ರಾಜಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ವತ್ ಆರೋಗ್ಯವನ್ನು ವಿಚಾರಿಸಿದರು.

ಈ ವೇಳೆ ಮಾತನಾಡಿದ ಪುನೀತ್, ವಿದ್ವತ್ ನಮ್ಮ ಫ್ಯಾಮಿಲಿ ಫ್ರೆಂಡ್‌‌. ಆತನನ್ನು ನಾನು ಚಿಕ್ಕವನಾಗಿದ್ದಾಗಿಂದಲೇ ನೋಡಿದ್ದೇನೆ. ವಿದ್ವತ್ ನನಗೆ ತಮ್ಮ ಇದ್ದಂತೆ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

Mohammed Haris Nalapad,vidvat, Puneeth Rajkumar

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ