ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸ್ವಾಗತಿಸಿದ ಮೋದಿ

ನವದೆಹಲಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು.

ಶುಕ್ರವಾರ ಬೆಳಗ್ಗೆ ರಾಷ್ಟ್ರಪತಿ ಭವನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಜಸ್ಟಿನ್ ಟ್ರುಡೋ, ಅವರ ಪತ್ನಿ ಹಾಗೂ ಮಕ್ಕಳನ್ನು ಪ್ರಧಾನಿ ಮೋದಿ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ರಾಷ್ಟ್ರಪತಿ ಭವನಕ್ಕೆ ತೆರಳಿದ ಟ್ರುಡೋ ಅವರಿಗೆ ಗೌರವ ವಂದನೆ ಸಲ್ಲಿಸಲಾಯಿತು.

2015 ರಲ್ಲಿ ಪ್ರಧಾನಿ ಮೋದಿ ಅವರು ಕೆನಡಾ ಪ್ರವಾಸ ಕೈಗೊಂಡಿದ್ದ ವೇಳೆ ಜಸ್ಟಿನ್ ಹಾಗೂ ಪುತ್ರಿ ಎಲಾ ಜತೆಗೆ ತೆಗೆಸಿಕೊಂಡಿದ್ದ ಫೋಟೋವನ್ನು ಟ್ವೀಟ್ ಮಾಡಿ ಸ್ಮರಿಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ