ಮಾರ್ಚ್ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ಮಾ.14-ಮಾರ್ಚ್ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಅಂತ್ಯದ ವೇಳೆಗೆ ರಾಜ್ಯದ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಲಿದೆ. ಇಂದು ನಡೆಯಲಿರುವ ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಪ್ರಮುಖ ಚರ್ಚೆ ನಡೆಯಲಿದೆ ಎಂದರು.

ಗೆಲುವೊಂದೇ ಅಭ್ಯರ್ಥಿಗಳ ಆಯ್ಕೆಗೆ ಮಾನದಂಡ. ಈ ಆಧಾರದಲ್ಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.

ನಾಳೆಯಿಂದ ಎಐಸಿಸಿ ಸಭೆ ನಡೆಯಲಿದ್ದು , ಟಿಕೆಟ್‍ಗೆ ಅರ್ಜಿ ಹಾಕಿದ್ದ ಎಲ್ಲ ಅಭ್ಯರ್ಥಿಗಳ ಕುರಿತ ವ್ಯಾಪಕ ಚರ್ಚೆ ನಡೆಯಲಿದೆ. ಈ ವೇಳೆ ಕೆಪಿಸಿಸಿ ಪ್ರತಿನಿಧಿಗಳು ನೀಡಿರುವ ವರದಿಯೂ ಚರ್ಚೆಗೆ ಬರಲಿದೆ ಎಂದು ಮಾಹಿತಿ ನೀಡಿದರು.

ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆಯಾಗುತ್ತಿದೆ. ಪಟ್ಟಿಗೆ ಹೆಸರು ಸೇರ್ಪಡೆ ಕುರಿತಂತೆ ಅಂತಿಮ ತೀರ್ಮಾನವನ್ನು ಎಐಸಿಸಿ ತೆಗೆದುಕೊಳ್ಳಲಿದೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗುವುದು ಎಂದು ಪ್ರಕಟಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ