ನಟ ಕಾರ್ತಿಕ್ ವಿಕ್ರಂ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಕಾರು, ಹಣ ಮತ್ತು ಮೊಬೈಲ್ ಕದ್ದು ಪರಾರಿ

ಬೆಂಗಳೂರು:ಮಾ-14: ದುಷ್ಕರ್ಮಿಗಳ ತಂಡವೊಂದು ಸ್ಯಾಂಡಲ್ ವುಡ್ ನಟನ ಮೇಲೆ ಹಲ್ಲೆ ನಡೆಸಿ ಆತನ ಬಳಿ ಇದ್ದ ಕಾರು, ಹಣ ಮತ್ತು ಮೊಬೈಲ್ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

‘ನಾಗವಲ್ಲಿ ವರ್ಸಸ್‌ ಆಪ್ತಮಿತ್ರರು’ ಚಿತ್ರದಲ್ಲಿ ನಾಯಕನಾಗಿ ನಟಿಸಿರುವ ಕಾರ್ತಿಕ್ ವಿಕ್ರಂ ಹಲ್ಲೆಗೊಳಗಾಗಿದ್ದು, ತಡ ರಾತ್ರಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ.

ಕಾರ್ತಿಕ್ ವಿಕ್ರಂ ತಮ್ಮ ಕಾರಿನಲ್ಲಿ ಮನೆಗೆ ಹೋಗುತ್ತಿದ್ದಾಗ ಎಂಟು ಮಂದಿ ದುಷ್ಕರ್ಮಿಗಳ ತಂಡ ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಕಾರಿನಿಂದ ಕಾರ್ತಿಕ್ ವಿಕ್ರಂನನ್ನು ಹೊರಗೆಳೆದು ಹಲ್ಲೆ ಮಾಡಿ ಆತನ ಬಳಿ ಇದ್ದ ಐವತ್ತು ಸಾವಿರ ಹಣ, ಒಂದು ಮೊಬೈಲ್ ಮತ್ತು ಸ್ವಿಫ್ಟ್ ಕಾರು ಕಸಿದುಕೊಂಡು ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾಗಿರುವ ನಟ ಕಾರ್ತಿಕ್ ವಿಕ್ರಂನನ್ನು ಬಸವೇಶ್ವರ ನಗರದ ಪುಣ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ತಿಕ್ ವಿಕ್ರಮ್ ಅವರ ಕಿವಿಗೆ ಗಂಭೀರವಾಗಿ ಹಲ್ಲೆ ನಡೆಸಲಾಗಿದ್ದು, ಅವರ ಕಿವಿ ಸರಿಯಾಗಿ ಕೇಳಿಸುತ್ತಿಲ್ಲ ಎಂದು ತಿಳಿದುಬಂದಿದೆ. ಈ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Actor Karthik Vikram,attacked,perpetrators

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ