ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಚಿಕ್ಕಬಳ್ಳಾಪುರ, ಮಾ.17- ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿಯಿಂದಾಗಿ 9 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ಹೋಗುವ ಕಣಿವೆ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಕೆಎಸ್‍ಆರ್‍ಟಿಸಿ ಹಾಗೂ ಖಾಸಗಿ ಬಸ್‍ಗಳ ನಡುವೆ ಡಿಕ್ಕಿ ಸಂಭವಿಸಿದೆ.
ಚಿಕ್ಕಬಳ್ಳಾಪುರದಿಂದ ಗೌರಿಬಿದನೂರಿಗೆ ತೆರಳುವ ಕಣಿವೆ ಪ್ರದೇಶ ಕಿರಿದಾಗಿದ್ದು, ಎರಡು ಕಾರುಗಳು ಚಲಿಸಬಹುದಾದ ಈ ರಸ್ತೆಯಲ್ಲಿ ಒಂದೇ ಬಾರಿಗೆ ಎರಡೂ ಬಸ್‍ಗಳು ಒಟ್ಟೊಟ್ಟಿಗೆ ಸಂಚರಿಸಿದ ಪರಿಣಾಮದಿಂದಾಗಿ ಇಂತಹ ಅವಘಡಗಳು ಪದೇ ಪದೇ ನಡೆಯುತ್ತಲೇ ಇವೆ. ಇದರಿಂದಾಗಿ ಸಾರ್ವಜನಿಕ, ಪ್ರಯಾಣಿಕರ ಪ್ರಾಣದೊಂದಿಗೆ ಚಲ್ಲಾಟವಾಡುವ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂಬುದು ಪ್ರಯಾಣಿಕರ ಅಳಲು.
ಈ ಬಗ್ಗೆ ಗ್ರಾಮಾಂತರ ಪೆÇಲೀಸರು ಪ್ರಕರಣ ದಾಖಲಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ