ಜಮ್ಮು-ಕಾಶ್ಮೀರದಲ್ಲಿ ಪಾಕ್ ಗುಂಡಿನ ದಾಳಿ: ಒಂದೇ ಕುಟುಂಬದ ಐವರು ನಾಗರಿಕರು ಸಾವು

ಪೂಂಚ್ :ಮಾ-18:ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಉದ್ದಟತನ ಮುಂದುವರೆಸಿದೆ. ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಐವರು ನಾಗರಿಕರು ಸಾವನ್ನಪ್ಪಿದ್ದಾರೆ.

ಇಲ್ಲಿನ ಬಾಲಕೋಟೆ ಪ್ರದೇಶದಲ್ಲಿ ಪಾಕ್ ನಡೆಸಿದ ಗುಂಡಿನ ದಾಳಿಗೆ ಒಂದೇ ಕುಟುಂಬದ ಐವರು ನಾಗರಿಕರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಮ್ಮು-ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ಎಸ್.ಪಿ.ವೇಡ್ ತಿಳಿಸಿದ್ದಾರೆ.

ಪಾಕ್ ನಿಂದ ಮೋರ್ಟಾರ್‌ ಶೆಲ್ ಮತ್ತು ಗುಂಡಿನ ದಾಳಿ ನಡೆಸಲಾಗಿದೆ.ಪಾಕ್‌ ದಾಳಿಗೆ ಭಾರತೀಯ ಸೈನಿಕರು ತಕ್ಕ ಉತ್ತರ ನೀಡಿದ್ದು , ಭಾರೀ ಪ್ರಮಾಣದಲ್ಲಿ ಪ್ರತಿ ದಾಳಿ ನಡೆಸುವ ಸಿದ್ಧತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಮೂರು ದಿನಗಳ ಹಿಂದೆಯಷ್ಟೇ ಭಾರತ ಕದನ ವಿರಾಮ ಉಲ್ಲಂಘಿಸಿದೆ ಎಂದು ಪಾಕ್ ವಿದೇಶಾಂಗ ಸಚಿವ ಕ್ವಾಜಾ ಮೊಹಮ್ಮದ್ ಅಸೀಫ್ ಆರೋಪಿಸಿದ್ದರು. ಇದರ ಬೆನ್ನಲ್ಲೇ ಪಾಕ್ ಕದನ ವಿರಾಮ ಉಲ್ಲಂಘನೆ ಮಾಡಿ ಮತ್ತೆ ಗುಂಡಿನ ದಾಳಿ ನಡೆಸಿದೆ.

5 Of A Family Killed,Pak Shelling,Jammu And Kashmir’s Poonch

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ