ಯುಗಾದಿ ಹಬ್ಬ ಸಂಭ್ರಮ: ದೇಶವಾಸಿಗಳಿಗೆ ಪ್ರಧಾನಿ ಮೋದಿ ಶುಭಾಷಯ

ಶ್ರೀಶೈಲ:ಮಾ-18:ದೇಶಾದ್ಯಂತ ಹೊಸ ವರ್ಷ ಉಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ  ದೇಶದ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ.

ಯುಗಾದಿ ಎಂದರೆ ಹೊಸ ಶಕೆ ಆರಂಭವಾದಂತೆ ಎಂಬ ಅರ್ಥವಿದೆ. ಯುಗಾದಿ ನಮ್ಮ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂದು ಯುಗಾದಿಯ ಮಹತ್ವವನ್ನು ಬಣ್ಣಿಸಿದ್ದಾರೆ.
ಇಂದು ಆಂಧ್ರಪ್ರದೇಶದ ಶ್ರೀಶೈಲ ಪೀಠದ ಸಹಯೋಗದೊಂದಿಗೆ ರಾಷ್ಟ್ರೀಯ ಜನ ಜಾಗೃತಿ ವೇದಿಕೆ ಆಯೋಜಿಸಿದ್ದ ರಾಷ್ಟ್ರೀಯ ಧರ್ಮ ಜಾಗೃತಿ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು, ಸಿದ್ದರಾಮೇಶ್ವರ, ಶಿವಶರಣೆ ಹೇಮರಡ್ಡಿ ಮಲ್ಲಮ್ಮರನ್ನು ಸ್ಮರಿಸಿದರು.
ಬಸವಣ್ಣನವರ ತತ್ವಾದರ್ಶಗಳನ್ನು ನಮ್ಮ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ತಿಳಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಕುರಿತು ಮಾಹಿತಿ ನೀಡಿದರು.

Ugadi, the festival of beginning of human civilisation,PM Modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ