ಬ್ಯೂಟಿ ಪಾರ್ಲರ್ ಗೆ ನುಗ್ಗಿ ಹಣಕ್ಕಾಗಿ ಬೆದರಿಕೆ

ಬೆಂಗಳೂರು, ಮಾ.28- ಬ್ಯೂಟಿ ಪಾರ್ಲರ್ ಒಂದಕ್ಕೆ ನುಗ್ಗಿ ಹಣಕ್ಕಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಇಬ್ಬರು ಕಾನ್‍ಸ್ಟೇಬಲ್‍ಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೆಣ್ಣೂರು ಠಾಣೆಯ ಕಾನ್‍ಸ್ಟೇಬಲ್‍ಗಳಾದ ವಿಠ್ಠಲ್ ಮತ್ತು ಶಾರುಕ್ ಬಂಧಿತ ಆರೋಪಿಗಳು ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೆÇಲೀಸ್ ಆಯುಕ್ತ ಸೀಮಂತ್‍ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಇಬ್ಬರು ಕಾನ್‍ಸ್ಟೇಬಲ್‍ಗಳು ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬ್ಯೂಟಿಪಾರ್ಲರ್‍ವೊಂದಕ್ಕೆ ರಾತ್ರಿ ದಾಳಿ ನೆಪದಲ್ಲಿ ನುಗ್ಗಿ ಅಲ್ಲಿದ್ದವರನ್ನು ಬೆದರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪಾರ್ಲರ್‍ನವರು ಬಾಣಸವಾಡಿ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಬಗ್ಗೆ
ತನಿಖೆ ನಡೆಸಿ ಇಬ್ಬರು ಕಾನ್‍ಸ್ಟೇಬಲ್‍ಗಳನ್ನು ಬಂಧಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ