ರಾಜಕೀಯದಲ್ಲಿ ಆಸಕ್ತಿ ಇಲ್ಲ; ಯಾವುದೇ ಪಕ್ಷದ ಪರ ಪ್ರಚಾರವನ್ನೂ ಮಾಡುವುದಿಲ್ಲ: ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟನೆ

ಮೈಸೂರು:ಮಾ-29: ಮೈಸೂರು ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜವಂಶಸ್ಥರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್, ನಾನು ಯಾವುದೇ ಪಕ್ಷದ ಸ್ಟಾರ್​ ಕ್ಯಾಂಪೇನರ್​ ಅಲ್ಲ. ರಾಜಕೀಯದಲ್ಲಿ ಆಸಕ್ತಿ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾ.30ರಂದು ಅಮಿತ್​ ಷಾ ನಮ್ಮ ವಂಶಸ್ಥರನ್ನ ಅರಮನೆಯಲ್ಲಿ ಭೇಟಿಯಾಗುವ ಕಾರ್ಯಕ್ರಮದ ಬಗ್ಗೆ ಮಾಧ್ಯಮದವರಿಂದಲೇ ಕೇಳುತ್ತಿದ್ದೇನೆ. ನಾನು ಯಾವುದೇ ಪಕ್ಷ ಸೇರುವುದಿಲ್ಲ. ರಾಜಕೀಯದಲ್ಲಿ ಆಸಕ್ತಿಯೂ ಇಲ್ಲ. ಹಾಗಾಗಿ ಯಾವುದೇ ಪಕ್ಷದ ಪರ ಪ್ರಚಾರವನ್ನೂ ಮಾಡುವುದಿಲ್ಲ ಎಂದು ಹೇಳಿದರು.

ಅಲ್ಲದೇ ನಾನು ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದೇನೆ. ಅದನ್ನೇ ಮುಂದುವರೆಸುತ್ತೇನೆ ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಯದುವೀರ್ ಬಿಜೆಪಿ ಸೇರುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದರು.

Mysore,yaduveer krishnadatta chamaraja wadiyar,not interested in politics,BJP,Amith Shah

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ