ಮೈಸೂರು: ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ

ಮೈಸೂರು:ಮಾ-೩೦: ರಾಜ್ಯ ವಿಧಾನಸಭೆ ಚುನಾವಣೆಯ ಜೋರಾಗುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದಾರೆ. ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ‌‌‌ದ ಶಾ, ಸುತ್ತೂರು ಶ್ರೀಗಳ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.

ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲಾಗಳಲ್ಲಿ ಪ್ರವಾಸ ಕೈಗೊಂಡಿರುವ ಅಮಿತ್ ಶಾ, ತಡರಾತ್ರಿ 1.40ಕ್ಕೆ ಮೈಸೂರಿಗೆ ಆಗಮಿಸಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಅವರು ಬೆಳಗ್ಗೆ ಸುತ್ತೂರು ಮಠಕ್ಕೆ ಭೇಟಿ ನೀಡಿದರು.

ಸುತ್ತೂರು ಮಠದಲ್ಲಿ ಅಮಿತ್ ಶಾ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ನಂತರ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ಆಶೀರ್ವಾದ ಪಡೆದು ಸಮಾಲೋಚನೆ ನಡೆಸಿದರು. ಶಾ ಅವರಿಗೆ ಕೇಂದ್ರ ಸಚಿವ ಅನಂತ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದರು.

Karnataka Assembly Election,Amit Shah,visits,Mysore,sutturu

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ