ಎಟಿಎಂ ಕೇಂದ್ರವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿ:

ಬೆಂಗಳೂರು,ಏ.2- ಎಟಿಎಂ ಕೇಂದ್ರವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಚಂದ್ರಲೇಔಟ್ ವ್ಯಾಪ್ತಿಯ ಯೂನಿವರ್ಸಿಟಿ ರಸ್ತೆಯಲ್ಲಿ ಎಚ್‍ಡಿಎಫ್‍ಸಿ ಬ್ಯಾಂಕ್‍ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ರಾತ್ರಿ 7 ಗಂಟೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಇದನ್ನು ಗಮನಿಸಿದವರು ತಕ್ಷಣ ಅಗ್ನಿಶಾಮಕ ದಳಕ್ಕೆ ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದು , ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಚಂದ್ರಲೇಔಟ್ ಪೆÇಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ