ಬಿಜೆಪಿ ಸ್ಥಾಪನಾ ದಿನಾಚರಣೆ

ಬೆಂಗಳೂರು:ಏ-6:ಬಿಜೆಪಿ ಸ್ಥಾಪನಾ ದಿನಾಚರಣೆ ಅಂಗವಾಗಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಧ್ವಜಾರೋಹಣ ನೆರವೇರಿಸಿದರು.

ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಬಿಎಸ್ ವೈ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಸಧೃಢ ಭಾರತದ ನಿರ್ಮಾಣಕ್ಕಾಗಿ 1980ರ ಏಪ್ರಿಲ್ 6ರಂದು ರಚನೆಯಾದ ಭಾರತೀಯ ಜನತಾ ಪಕ್ಷವು ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ರೂಪುಗೊಂಡಿದೆ. ಇದರ ಶ್ರೇಯ ಬಿಜೆಪಿಯ ಎಲ್ಲಾ ಕಾರ್ಯಕರ್ತರಿಗೆ ಸಲ್ಲಬೇಕು ಎಂದರು.

ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪಕ್ಷದ ಸದಸ್ಯನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ಹೇಳಿದರು. ಈ ವೇಳೆ ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ಎಸ್. ಸುರೇಶ್ ಕುಮಾರ್, ಸಂಸದರಾದ ಭಗವಂತ ಖೂಬ,ಎನ್.ರವಿಕುಮಾರ್, ಕು.ಮಂಜುಳಾ ಮತ್ತಿತರ ಮುಖಂಡರು ಉಪಸ್ಥಿತರಿದ್ದರು

BJP,samsthapana din,B. S. Yeddyurappa

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ