ಕೋಲಾರದ ಮುಳಬಾಗಿಲಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರೋಡ್ ಶೋ

ಕೋಲಾರ:ಏ-7: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೋಲಾರದಲ್ಲಿ ಜನಾಶಿರ್ವಾದ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಭರ್ಜರಿ ಪ್ರಚಾರ ನಡೆಸಿದರು.

ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಮುಳಬಾಗಿಲು ನಗರದ ವರದರಾಜ ಚಿತ್ರಮಂದಿರದಿಂದ ಸೌಂದರ್ಯ ಸರ್ಕಲ್ ಮೂಲಕ ಅಂಬೇಡ್ಕರ್ ವೃತ್ತದವರೆಗೆ ರಾಹುಲ್ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು.

ಮುಳಬಾಗಿಲು ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ರಾಗ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದರೆ‌ ಕೋಲಾರ ಜಿಲ್ಲೆಯ ನೀರಿನ‌ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.


ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈಗಾಗಲೇ ಜನಪರ ಆಡಳಿತ ನೀಡಿದೆ. ಮುಂಬರುವ‌ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ. ಈ ಹಿಂದೆ ಭ್ರಷ್ಟಚಾರ ಆಡಳಿತ ನೀಡಿದ ಬಿಜೆಪಿಗೆ ಮತ ನೀಡದೀರಿ ಎಂದು ಮನವಿ ಮಾಡಿದರು.

ಸಿಎಂ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿಗಳಾದ ವೇಣುಗೋಪಾಲ್, ಕೆಪಿಸಿಸಿ ಅದ್ಯಕ್ಷ ಪರಮೇಶ್ವರ್, ಡಿ.ಕೆ.ಶಿವ ಕುಮಾರ್, ಸಚಿವ ರಮೇಶ್ ಕುಮಾರ್ ಸೇರಿದಂತೆ ಜಿಲ್ಲೆಯ ಮುಖಂಡರು ರ್ಯಾಲಿಯಲ್ಲಿ ಭಾಗವಹಿಸಿದ್ದರು.

assembly election,rahul gandhi,road show,kolara mulabagilu

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ