ಟ್ರಕ್ಕೊಂದು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನ ಸಾವು:

ಕಟ್ನಿ (ಮ.ಪ್ರ.), ಏ.7-ಅತಿ ವೇಗದ ಟ್ರಕ್ಕೊಂದು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟು, ಇತರ ಐವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಮಜ್ಗಾವನ್‍ನಲ್ಲಿ ಸಂಭವಿಸಿದೆ. ಇಂದು ಬೆಳಗ್ಗೆ 10 ಗಂಟೆಯಲ್ಲಿ ಈ ಘಟನೆ ನಡೆದಿದೆ. ಎರಡು ಆಟೋಗಳಲ್ಲಿದ್ದ ಎಂಟು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಐವರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ