ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ: ರಾಹುಲ್ ಗಾಂಧಿ

ಬೆಂಗಳೂರು:ಏ-8: ವಿಧಾನಸಭಾ ಚುನಾವನೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮುಂದಿನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ, ಅಧಿಕಾರಕ್ಕೆ ಬಂದರೆ ಅವರೇ ಸಿಎಂ ಎಂದು ಇನ್ನೊಮ್ಮೆ ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ, ಇದು ಸಿದ್ದರಾಮಯ್ಯ ಹಾಗೂ ವೇಣುಗೋಪಾಲ್‍ಗೆ ಸಂಬಂಧಿಸಿದ ವಿಚಾರ. ಅದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿ, ಎರಡು ಕ್ಷೇತ್ರದಲ್ಲಿ ಕೂಡ ಸಿಎಂ ಸ್ಪರ್ಧೆಗೆ ಹಸಿರು ನಿಶಾನೆ ನೀಡಿದರು. ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ನಿರ್ಧರಿಸಲಿದ್ದಾರೆ. ಅವರಿಗೆ ಆ ವಿಚಾರದಲ್ಲಿ ಸಂಪೂರ್ಣ ಸ್ವಾತಂತ್ರ್ಯ ಇದೆ ಎಂದರು.

ಮಠಗಳಿಗೆ ನಾನು ಭೇಟಿ ನೀಡಿದ್ದ ವೇಳೆ ನಾನು ರಾಜಕೀಯ ವಿಚಾರ ಮಾತನಾಡಿಲ್ಲ. ಆಧ್ಯಾತ್ಮಿಕ ವಿಚಾರಗಳಲ್ಲಿ ನನಗೂ ಸಾಕಷ್ಟು ಆಸಕ್ತಿ ಇದೆ. ಅಲ್ಲಿ ಭೇಟಿ ಸಂದರ್ಭ ನನಗೆ ಸಾಕಷ್ಟು ಮಾಹಿತಿ ಸಿಕ್ಕಿದೆ ಎಂದಿದ್ದಾರೆ.

ರಾಜ್ಯದಲ್ಲಿ ಮರಳಿ ಕಾಂಗ್ರೆಸ್ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಮರ್ಥ ನಾಯಕತ್ವ ಹಾಗೂ ಸದೃಢ ಸಂಘಟನೆ ಕಾಂಗ್ರೆಸ್‌ನಲ್ಲಿದೆ. ಆಡಳಿತ ವಿರೋಧಿ ಅಲೆಯಿಲ್ಲ ಎನ್ನುವುದು ಜನಾಶೀರ್ವಾದ ಯಾತ್ರೆಯಿಂದ ಅರಿವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲಿಂಗಾಯತ ಧರ್ಮ ಒಡೆಯುವ ಕೆಲಸ ಮಾಡಲಾಗಿಲ್ಲ. ಇದರಿಂದ ರಾಜಕೀಯ ಲಾಭ ಪಡೆಯುವ ಉದ್ದೇಶವೂ ಪಕ್ಷಕ್ಕಿಲ್ಲ. ಈ ಬಾರಿಯ ಚುನಾವಣೆ ಆರೆಸ್ಸೆಸ್‌ ಮತ್ತು ಕಾಂಗ್ರೆಸ್ ನಡುವಿನ ಸೈದ್ಧಾಂತಿಕ ಸಂಘರ್ಷವಾಗಿದೆ. ಬೇರೆ ಭಾಗಕ್ಕಿಂತ ಪ್ರಬುದ್ಧ ಮತದಾರರು ಇಲ್ಲಿದ್ದಾರೆ. 10 ವರ್ಷಗಳ ನಂತರದ ಭವಿಷ್ಯವನ್ನು ಇಂದೇ ಯೋಚಿಸುವ ಬುದ್ದಿ ಇಲ್ಲಿನವರಲ್ಲಿದೆ. ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ ಚಲಾಯಿಸುತ್ತಾರೆ. ಮುಂದಿನ ಲೋಕಸಭೆ ಚುನಾವಣೆಗೆ ಇಲ್ಲಿಂದಲೇ ಅಡಿಗಲ್ಲು ಬೀಳಲಿದೆ. ಆ ಚುನಾವಣೆ ನಮಗೆ ಬಿಗ್ ಚಾಲೆಂಜ್ ಆಗಿದೆ. ನೀರಾವರಿ, ಕೃಷಿ, ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕಿದೆ ಎಂದು ಹೇಳಿದರು.

Assembly election, next cm siddaramaiah.Rahul gandhi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ