ಬಿ.ಎಸ್.ಯಡಿಯೂರಪ್ಪರಿಂದ ಗದಗದಲ್ಲಿ ಲಂಬಾಣಿ ತಾಂಡಗಳಿಗೆ ಭೇಟಿ

ಗದಗ:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಲಂಬಾಣಿ ತಾಂಡಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಸಂವಾದ ನಡೆಸಿದರು.

ಲಂಬಾಣಿ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಸಮುದಾಯವನ್ನು ನಿರ್ಲಕ್ಷಿಸಿದೆ. ಲಂಬಾಣಿಗರಿಗೆ ದೊರಕಬೇಕಾದ ಸವಲತ್ತುಗಳು ಸರಿಯಾಗಿ ಸಿಗುತ್ತಿಲ್ಲ ಎಂದು ಹೇಳಿದರು.

ಸಮುದಾಯದ ಅಭಿವೃದ್ಧಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಮುಂದೆಯೂ ಕೂಡ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಮುದಾಯದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಲಂಬಾಣಿ ಸಮುದಾಯದ ಅನೇಕ ಮುಖಂಡರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Former CM B.S. Yeddyurappa, met and interacted with Lambani Thandas,Sirahatti in Gadag

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ