ಉತ್ತರ ಪ್ರದೇಶ ಸಿಎಂ ಯೋಗಿ ವಿರುದ್ಧ ವಿವಾದಾತ್ಮಕ ಹೇಳಿಕೆ: ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ದಿನೇಶ್ ಗುಂಡೂರಾವ್

ಬೆಂಗಳೂರು:ಏ-15: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್​ ಗುಂಡೂರಾವ್​ ವಿಷಾದ ವ್ಯಕ್ತಪಡಿಸಿದ್ದಾರೆ.

ತಮ್ಮ ಟ್ವಿಟರ್​ ಖಾತೆಯಲ್ಲಿ ಈ ಕುರಿತು ಹೇಳಿಕೆಯನ್ನು ನೀಡಿರುವ ಗುಂಡೂರಾವ್, ಅತ್ಯಾಚಾರ ಆರೋಪಿಗಳ ವಿರುದ್ಧದ ಕೋಪದ ಭರದಲ್ಲಿ ನಾನು ಭಾವುಕನಾಗಿ ಈ ಹೇಳಿಕೆಯನ್ನು ನೀಡಿದ್ದೆ. ನನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್‌ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂಬ ದಿನೇಶ್ ಗುಂಡೂರಾವ್ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿತ್ತು. ಈ ಹಿನ್ನಲೆಯಲ್ಲಿ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಎಚ್ಚೆತ್ತ ದಿನೇಶ್ ಗುಂಡೂರಾವ್, ಟ್ವೀಟ್‌ನಲ್ಲಿ ”ಆದಿತ್ಯನಾಥ ವಿವಾದಕ್ಕೆ ನನ್ನ ಪ್ರತಿಕ್ರಿಯೆ. ಅತ್ಯಾಚಾರ ಬಲಿಪಶುಗಳ ಪರವಾದ ನೋವು ಮತ್ತು ಆದಿತ್ಯನಾಥ್ ಸರ್ಕಾರದ ಸಂಪೂರ್ಣ ನಿರಾಸಕ್ತಿ ಕುರಿತಾಗಿ ಭಾವನಾತ್ಮಕ ಆಕ್ರೋಶವಾಗಿತ್ತು. ಅದು ಆಕ್ರಮಣಕಾರಿ ಎಂದಾದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ಉತ್ತರದಲ್ಲಿ ಕಾನೂನ ಸುವ್ಯವಸ್ಥೆ ವಿಚಾರ ಗಂಭೀರವಾಗಿದೆ.” ಎಂದು ಹೇಳಿದ್ದಾರೆ.

UP CM Adityanath controversy, regret if it’s offensive,dinesh gundu rao,reaction

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ