ರೈಲಿನಲ್ಲಿ 9 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನ ಬಂಧನ

ಚೆನ್ನೈ:ಏ-23: ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣದಂದನೆ ಶಿಕ್ಷೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ನೆ ಜಾರಿಗೆ ತಂದ ಬೆನ್ನಲ್ಲೇ ಬಾಲಕಿ ಮೇಲೆ ಬಿಜೆಪಿ ಮುಖಂಡನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಚಲಿಸುತ್ತಿದ್ದ ರೈಲಿನಲ್ಲಿ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ತಮಿಳುನಾಡು ಬಿಜೆಪಿ ಮುಖಂಡನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ ಮೂಲದ ವಕೀಲ ಮತ್ತು ಬಿಜೆಪಿ ಮುಖಂಡ ಕೆಪಿ ಪ್ರೇಮ್ ಅನಂತ್ ಎಂಬಾತನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದು, ಪ್ರಸ್ತುತ ಪೋಕ್ಸೋ ಕಾಯ್ದೆಯಡಿಯಲ್ಲಿ ಆರೋಪಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಕೇರಳ ಮೂಲದ ಕುಟುಂಬವೊಂದು ತಿರುವನಂತಪುರಂನಿಂದ ಚೆನ್ನೈಗೆ ರೈಲಿನಲ್ಲಿ ಪ್ರಯಾಣಿಸುತ್ತಿತ್ತು. ರೈಲಿನ ಮಧ್ಯ ಸೀಟಿನಲ್ಲಿ 9 ವರ್ಷದ ಬಾಲಕಿ ಕೂಡ ಇದ್ದರು. ಶನಿವಾರ ರಾತ್ರಿ ರೈಲು ಸೇಲಂ ಮತ್ತು ಈರೋಡ್ ನಡುವೆ ಸಂಚರಿಸುತ್ತಿದ್ದಾಗ ವಕೀಲ ಬಾಲಕಿಯ ಎದೆ ಭಾಗವನ್ನು ಅಶ್ಲೀಲವಾಗಿ ಮುಟ್ಟಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದು, ಕೂಡಲೇ ಎಚ್ಚೆತ್ತ ಪೊಷಕರಿಗೆ ವಿಚಾರ ತಿಳಿಸಿದ್ದಾಳೆ.

ಅಲ್ಲಿದ್ದ ಸಹ ಪ್ರಯಾಣಿಕರು ಆರೋಪಿಯನ್ನು ಹಿಡಿದು ರೈಲ್ವೇ ಪೊಲೀಸರ ವಶಕ್ಕೆ ನೀಡಿದ್ದಾರೆ. ಮೂಲಗಳ ಪ್ರಕಾರ ಬಂಧಿತ ಆರೋಪಿ ಬಿಜೆಪಿ ಮುಖಂಡನಾಗಿದ್ದು, ಈ ಹಿಂದೆ ಜಯಲಲಿತಾ ಅವರ ಆರ್ ಕೆನಗರ ಕ್ಷೇತ್ರದಿಂದ 2006ರಲ್ಲಿ ಅವರ ಪ್ರತಿಸ್ಪರ್ಧಿಯಾಗಿ ಸ್ಪರ್ಧಿಸಿದ್ದ ಎನ್ನಲಾಗಿದೆ.

9-year-old girl, ‘molested’, in a moving train,Tamil Nadu,lawyer and BJP Leader Arrested

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ