ವರುಣಾ ಕ್ಷೇತ್ರದಿಂದ ಹಿಂದೆ ಸರಿದ ವಿಜಯೀಂದ್ರ; ವರುಣಾ ದಿಂದ ತಮ್ಮ ಪುತ್ರ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಬಿಎಸ್ ವೈ

ಮೈಸೂರು:ಏ-23: ರಾಜ್ಯ ವಿಧಾನಸಭಾ ಚುನಾವಣೆಯ ಕದನ ಕೌಥುಕ ಕ್ಷೇತ್ರವಾಗಿ ಪರಿಣಮಿಸಿದ್ದ, ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರಿನ ವರುಣಾ ಕ್ಷೇತ್ರದಿಂದ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೀಂದ್ರ ಸ್ಪರ್ಧೆಯಿಂದ ಹಿಂದೆಸರಿದಿದ್ದು, ಅಚ್ಚರಿಗೆ ಕಾರಣವಾಗಿದೆ.

ವರುಣಾ ಕ್ಷೇತ್ರದಿಂದ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರು ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ನಂಜನಗೂಡಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ವರುಣಾದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತ ಸ್ಪರ್ಧಿಸುತ್ತಾರೆ. ಅವರಿಗೆ ನಿಮ್ಮ ಬೆಂಬಲ ನೀಡಿ ಎಂದು ಮನವಿ ಮಾಡಿದ್ದಾರೆ.

ಆರ್​ಎಸ್​ಎಸ್​ ಹಿನ್ನೆಲೆ ಹೊಂದಿರುವ ಮೈಸೂರು ಜಿ.ಪಂ.ಸದಸ್ಯ ಸದಾನಂದ ಅವರು ವರುಣಾದಿಂದ ಸ್ಪರ್ಧಿಸುತ್ತಾರೆ ಎಂದು ತಿಳಿದು ಬಂದಿದೆ.

ಈ ನಡುವೆ ವರುಣಾದಿಂದ ವಿಜಯೇಂದ್ರ ಅವರಿಗೆ ಟಿಕೆಟ್​ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ವಿಜಯೇಂದ್ರ ಅವರ ಕಾರು ತಡೆದು ಪ್ರತಿಭಟನೆ ನಡೆಸಿದ್ದಾರೆ. ವಿಜಯೇಂದ್ರ ಅವರೇ ಸ್ಪರ್ಧಿಸಬೇಕು ಎಂದು ಅವರ ಬೆಂಬಲಿಗರು ಘೋಷಣೆ ಕೂಗಿ ಆಗ್ರಹಿಸಿದ್ದಾರೆ.

Assembly Election,B S Yeddyurappa,B.Y. Vijayendra,Varuna

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ