7 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು,ಏ.24: ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ.

ಐಎಎಸ್ ಅಧಿಕಾರಿ ಸಾವಿತ್ರಿ ಅವರನ್ನು ಬೆಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾಗಿ, ಎಂ ಮಂಜುನಾಥ್ ನಾಯಕ್ ಅವರನ್ನು ಮೀನುಗಾರಿಕಾ ಇಲಾಖೆಯ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಅಂತೆಯೇ ಕೆಪಿ ಮೋಹನ್ ರಾಜ್ ಅವರನ್ನು ಮುನ್ಸಿಪಲ್ ಆಡಳಿತ ನಿರ್ದೇಶಕರನ್ನಾಗಿ, ಹೆಚ್ ಆರ್ ಮಹದೇವನ್ ಅವರನ್ನು ರಾಷ್ಟ್ರೀಯ ಗ್ರಾಮೀಣ ಜೀವನಾಧಾರ ಮಿಷನ್ ಮತ್ತು ನ್ಯಾಷನಲ್ ಅರ್ಬನ್ ಲೈವ್ಲಿಹುಡ್ ಮಿಷನ್ ನಿರ್ದೇಶಕರನ್ನಾಗಿ ವರ್ಗ ಮಾಡಲಾಗಿದೆ. ಇನ್ನು ಕೆಬಿ ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು) ಇಲಾಖೆಯ ಉಪ ಕಾರ್ಯದರ್ಶಿಯಾಗಿ ಮತ್ತು ಬಿ ರಾಮು ಅವರನ್ನು ಪ್ರವಾಸೋಧ್ಯಮ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ