ವಾರದೊಳಗೆ ಹಾಸನ ಜಿಲ್ಲಾಧಿಕಾರಿ ಮತ್ತೆ ವರ್ಗಾವಣೆ: ರಂದೀಪ್ ಜಾಗಕ್ಕೆ ಪಿ ಸಿ ಜಾಫರ್ ನೇಮಕ

ಹಾಸನ:ಏ-25: ವಾರದೊಳಗೆ ಹಾಸನ ಜಿಲ್ಲಾಧಿಕಾರಿಯನ್ನು ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಗಳಾಗಿ ಪಿಸಿ ಜಾಫರ್ ನೇಮಕವಾಗಿದ್ದಾರೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಬಳಿಕ ಜಿಲ್ಲಾಧಿಕಾರಿಯಾಗಿದ್ದ ಡಿ.ರಂದೀಪ್‌ ಅವರನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಬದಲಾಯಿಸಿರುವ ರಾಜ್ಯ ಸರ್ಕಾರ ಇದೀಗ ಡಾ.ಪಿ.ಸಿ.ಜಾಫ‌ರ್‌ ಅವರನ್ನು ನೇಮಕ ಮಾಡಿದೆ.

ಇನ್ನು ತಮ್ಮ ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡುವ ಆದೇಶದ ಮೇಲೆ ಮುಂದಿನ ಬೆಳವಣಿಗೆಗಳು ನಡೆಯಲಿವೆ ಎನ್ನಲಾಗಿದೆ.

ಈ ನಡುವೆ ಕೇವಲ 8 ದಿನದಲ್ಲಿ ಜಿಲ್ಲಾಧಿಕಾರಿ ರಂದೀಪ್ ಅವರ ವರ್ಗಾವಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಯೋಗ ಸಮರ್ಥನೆ ನೀಡಿದ್ದು, ಚುನಾವಣಾ ಕರ್ತವ್ಯಕ್ಕೆ ಚ್ಯುತಿ ಬರುವ ರೀತಿಯಲ್ಲಿ ನಡೆದುಕೊಂಡಿದ್ದರಿಂದ ಹಾಸನ ಜಿಲ್ಲಾಧಿಕಾರಿ ರಂದೀಪ್‌ ಅವರನ್ನು ವರ್ಗಾವಣೆಗೊಳಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಹೇಳಿದ್ದಾರೆ.

Hassan DC,Randeep shifted again, Jaffer is new DC

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ