ಕಮಲಕ್ಕೆ ಜೈ ಎಂದ ಕಂಗಟಿ, ಬಸವಂತಪುರ ಗ್ರಾಮದ ಯುವಕರು ಬಿಜೆಪಿಗೆ ಸೇರ್ಪಡೆ

ಬೀದರ್, ಏ. 26- ಬೀದರ್ ಕ್ಷೇತ್ರದ ಕಂಗಟಿ ಹಾಗೂ ಬಸವಂತಪುರ ಗ್ರಾಮದ ಹಲವರು ಬಿಜೆಪಿಗೆ ಸೇರ್ಪಡೆಯಾದರು. ಕಾಂಗ್ರೆಸ್, ಜೆಡಿಎಸ್ ಸೇರಿ ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿ ಸೇರಿದರು.

ಪಕ್ಷದ ಧ್ವಜ ನೀಡಿ ಬರಮಾಡಿಕೊಂಡ ಕ್ಷೇತ್ರದ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ, ಹಲವರು ಬಿಜೆಪಿ ಸೇರ್ಪಡೆಯಾಗಿದ್ದು ಖುಷಿ ತಂದಿದೆ. ಇನ್ನೂ ಕ್ಷೇತ್ರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಸೇರಲಿದ್ದಾರೆ. ನಾವೇ ಅಭ್ಯರ್ಥಿ ಎಂದು ತಿಳಿದು ಕೆಲಸ ಮಾಡಬೇಕು ಎಂದು ಹೇಳಿದರು.

ಕ್ಷೇತ್ರದ ಎಲ್ಲೆಡೆ ಬಿಜೆಪಿ ಪರ ಹವಾ ಇದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೇ 12 ರವರೆಗೆ ಹಗಲಿರುಳು ಶ್ರಮಿಸಬೇಕು. ಎಲ್ಲ ಸಮುದಾಯದ ಜನರಿಗೆ ವಿಶ್ವಾಸಕ್ಕೆ ತೆಗೆದುಕೊಂಡು ಪ್ರಚಾರ ನಡೆಸಿ. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಒಂದೇ ಆಯ್ಕೆ ಇದೆ ಎಂದು ಹೇಳಿದರು.

ಆಡಳಿತರೂಢ ಕಾಂಗ್ರೆಸ್ ವಿರುದ್ಧ ಜನ ತಿರುಗಿ ಬಿದ್ದಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಹೇಳಿಕೊಳ್ಳುವಂಥ ಅಭಿವೃದ್ಧಿ ಕೆಲಸ ಆಗಿಲ್ಲ. ಕ್ಷೇತ್ರದ ಜನ ಪರಿವರ್ತನೆ ಬಯಸಿದ್ದು, ಬಿಜೆಪಿಗೆ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ