ದಲಿತ ಮುಖಂಡರು ಬಿಜೆಪಿಗೆ ಸೇರ್ಪಡೆ

ಬೀದರ್, ಏ. 27-ಹಲವು ದಲಿತ ಸಮುದಾಯದ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.
ಶುಕ್ರವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬಾದಾಸ ಗಾಯಕವಾಡ, ಚಂದ್ರಕಾಂತ ನಿರೋಟೆ ಸೇರಿದಂತೆ ಹಲವರು ಬಿಜೆಪಿಗೆ ಸೇರಿದರು. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಸೂರ್ಯಕಾಂತ ನಾಗಮಾರಪಳ್ಳಿ, ದಲಿತ, ಹಿಂದುಳಿದ ಸಮಾಜದ ಅಭಿವೃದ್ಧಿಗಾಗಿ ಕೇಂದ್ರದ ಬಿಜೆಪಿ ಸರ್ಕಾರ ಹಲವು ಯೋಜನೆಗಳು ಜಾರಿಗೆ ತಂದಿದೆ. ಬಾಬಾ ಸಾಹೇಬರ ತತ್ವದ ಮೇಲೆ ಪ್ರಧಾನಿ ನರೇಂದ್ರ ಮೋದಿ ಆಡಳಿತ ನಡೆಸುತ್ತಿದ್ದಾರೆ ಎಂದರು.

ದಲಿತರ ಮತ ಪಡೆದು ಇಷ್ಟು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದಲಿತ ಸಮುದಾಯದ ಅಭಿವೃದ್ಧಿ ಮಾಡಿಲ್ಲ. ಕೇವಲ ಓಟ್ ಬ್ಯಾಂಕ್‍ಗಾಗಿ ಮಾತ್ರ ಹಿಂದುಳಿದ ಸಮುದಾಯಕ್ಕೆ ಬಳಸಿಕೊಂಡಿರುವ ಕಾಂಗ್ರೆಸ್‍ಗೆ ಈ ಬಾರಿ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಕುಮಾರ ಕಾಂಗೆ ಇತರರಿದ್ದರು.
====================

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ