ಸ್ವಚ್ಛ, ದಕ್ಷ ಹಾಗು ಪ್ರಾಮಾಣಿಕ ಆಡಳಿತ ನೀಡಲು ಬಿಜೆಪಿ ಬದ್ಧವಾಗಿದೆ: ಬಿಎಸ್ ಯಡಿಯೂರಪ್ಪ

ಹಾಸನ:ಏ-27: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆ ಮುಂದಿನ 5 ವರ್ಷಗಳು ನೆಮ್ಮದಿಯ ಬದುಕನ್ನು ಸಾಗಿಸುವಂತಾಗಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದರು.

ಇಂದು ಹಾಸನ ಮತ್ತು ಅರಕಲಗೂಡಿನಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿ ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು ಕಳೆದ 5 ವರ್ಷಗಳಲ್ಲಿ ರಾಜ್ಯವನ್ನು ಅತ್ಯಂತ ದುಃಸ್ಥಿತಿಗೆ ತಳ್ಳಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸ್ವಚ್ಛ, ದಕ್ಷ ಹಾಗು ಪ್ರಾಮಾಣಿಕ ಆಡಳಿತ ನೀಡಲು ಬಿಜೆಪಿ ಬದ್ಧವಾಗಿದೆ ಎಂದು ನುಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆ ಮುಂದಿನ 5 ವರ್ಷಗಳು ನೆಮ್ಮದಿಯ ಬದುಕನ್ನು ಸಾಗಿಸುವಂತಾಗಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇನೆಂದು ಭರವಸೆ ನೀಡಿದರು.

ಬಿಜೆಪಿ ಅಭ್ಯರ್ಥಿಗೆ ಮತನೀಡಿ ಗೆಲ್ಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಮುಖಂಡರುಗಳಾದ ಬಿ.ಜೆ.ಪುಟ್ಟಸ್ವಾಮಿ, ಯೋಗಾ ರಮೇಶ್, ಪ್ರೀತಮ್ ಗೌಡ ಮುಂತಾದವರು ಸಮಾವೇಶದಲ್ಲಿ ಭಾಗವಹಿಸಿದ್ದರು.

Former CM B.S. Yeddyurappa, participated in public rallies,Arkalgudu and Hassan

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ