ಕಣದಿಂದ ಹಿಂದೆ ಸರಿದ ಶಿರೂರು ಲಕ್ಷ್ಮೀವರ ತೀರ್ಥ ಶ್ರಿಗಳು

ಉಡುಪಿ:ಏ-27: ಉಡುಪಿ ವಿಧಾನಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಿರೂರು ಲಕ್ಷ್ಮೀವರ ತೀರ್ಥ ಶ್ರಿಗಳು ಕಣದಿಂದ ಹಿಂದೆ ಸರಿದಿದ್ದಾರೆ.

ಕೇಂದ್ರ ಬಿಜೆಪಿ ನಾಯಕರು ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮತ್ತು ನರೇಂದ್ರ ಮೋದಿ, ಅಮಿತ್ ಶಾಗೆ ಬೆಂಬಲ‌ ನೀಡುವ ಉದ್ದೇಶದಿಂದ ನಾಮಪತ್ರ ಹಿಂಪಡೆದಿರುವುದಾಗಿ ಶ್ರೀಗಳು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಉಡುಪಿಗೆ ಬರುವುದರಿಂದ ತಮ್ಮಿಂದಾಗಿ ಬಿಜೆಪಿಯ ಧ್ಯೇಯ ಚಿಂತನೆಗಳಿಗೆ ತೊಡಕುಂಟಾಗಬಾರದು ಎಂಬ ಉದ್ದೇಶದಿಂದ ಚುನಾವಣೆಯಿಂದ ಹಿಂದೆ ಸರಿದಿದ್ದಾಗಿ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ.

karnataka assembly election, shiruru shri,udupi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ