ಗಲ್ಲಿಗಳಲ್ಲಿ ಸೂರ್ಯಕಾಂತ ನಾಗಮಾರಪಳ್ಳಿ ಪ್ರಚಾರ

 

ಗಲ್ಲಿಗಳಲ್ಲಿ ಸೂರ್ಯಕಾಂತ ನಾಗಮಾರಪಳ್ಳಿ ಪ್ರಚಾರ
ಬೀದರ್, ಏ. 29- ಬೀದರ್ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸೂರ್ಯಕಾಂತ ನಾಗಮಾರಪಳ್ಳಿ ಅವರು ಭಾನುವಾರ ನಗರದ ಮೈಲೂರು ಸೇರಿ ವಿವಿಧ ಬಡಾವಣೆಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು.

ಈ ವೇಳೆ ಮಾತನಾಡಿದ ಸೂರ್ಯಕಾಂತ ನಾಗಮಾರಪಳ್ಳಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಮಾನ ಆದ್ಯತೆ ನೀಡುವುದೇ ನನ್ನ ಮೊದಲ ಗುರಿ. ಕ್ಷೇತ್ರವನ್ನು ಮಾದರಿ ಮಾಡುವ ಕನಸು ನನ್ನದು ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರೃ ಸಿಕ್ಕ ನಂತರ ಬಹುತೇಕ ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಜಾತಿ ರಾಜಕಾರಣ ಮಾಡಿ ಒಡೆದಾಳುವ ನೀತಿ ಅನುಸರಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ ನಾಲ್ಕು ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸುತ್ತಿದ್ದಾರೆ.

ಜಗತ್ತೇ ಭಾರತದ ಕಡೆಗೆ ತಿರುಗಿ ನೋಡುತ್ತಿದೆ ಎಂದು ಹೇಳಿದರು. ಪ್ರಮುಖರಾದ ರೇವಣಸಿದ್ದಪ್ಪ ಜಲಾದೆ, ಶಿವರಾಜ ಕುದರೆ, ವಿರೂಪಾಕ್ಷ ಗಾದಗಿ, ಹಣಮಂತ ಬುಳ್ಳಾ, ಮಹೇಶ್ವರ ಸ್ವಾಮಿ, ನಾಗರಾಜ ಹುಲಿ ಇತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ