ವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಕೌಡಾಳ ಪ್ರಚಾರ

ವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಕೌಡಾಳ ಪ್ರಚಾ
ಬೀದರ್, ಏ. 30- ಔರಾದ್ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ ಅವರು ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಪಾದಯಾತ್ರೆ ಕೈಗೊಂಡು ಮತಯಾಚನೆ ಮಾಡಿದರು.

ಕಮಲನಗರ, ಖತಗಾಂವ ಸೇರಿದಂತೆ ಇತರೆ ಗ್ರಾಮಗಳಿಗೆ ಭೇಟಿ ನೀಡಿ ಮನೆ ಮನೆಗೆ ತೆರಳಿದ ವಿಜಯಕುಮಾರ ಕೌಡಾಳ, ಸಿಎಂ ಸಿದ್ದರಾಮಯ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಮತ ಕೋರಿದರು. ಎಲ್ಲ ವರ್ಗದ ಹಿತ ಕಾಂಗ್ರೆಸ್‍ನಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ಎಲ್ಲ ಸಮಾಜದ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಆಡಳಿತ ನೀಡಿದೆ. ರಾಜ್ಯದ ಹಿಂದುಳಿದ ಔರಾದ್ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡುವ ವಿಜನ್ ಹೊಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲಿಸುವ ಮೂಲಕ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಎಂಎಲ್ಸಿ ವಿಜಯಸಿಂಗ್ ಇತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ