ವಿವಿಧೆಡೆ ಕಲ್ಲೂರ್ ಮತಯಾಚನೆ ಬಿಜೆಪಿ ಆಡಳಿತ ಪಕ್ಕಾ

ವಿವಿಧೆಡೆ ಕಲ್ಲೂರ್ ಮತಯಾಚನೆ
ಬಿಜೆಪಿ ಆಡಳಿತ ಪಕ್ಕಾ
ಬೀದರ್, ಏ. 30- ಜಿಲ್ಲೆಯ ಹುಮನಾಬಾದ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಭಾಷ ಕಲ್ಲೂರ್ ಅವರು ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

ಸೋಮವಾರ ಕನಕಟ್ಟಾ, ಮಾಣಿಕನಗರ, ಹುಣಸಗೇರಾ, ರಾಜೋಳಾ ಸೇರಿ ಇತರೆ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿದರು. ಈ ವೇಳೆ ಮಾತನಾಡಿ, ಜಾತಿ, ಧರ್ಮ ಒಡೆದು ರಾಜಕಾರಣ ಮಾಡುವ ಕಾಂಗ್ರೆಸ್ ಈ ಬಾರಿ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಈ ಬಾರಿ ರಾಜ್ಯದಲ್ಲಿ ಪೂರ್ಣಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಪಕ್ಕಾ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್‍ಮುಕ್ತಕ್ಕೆ ದಿನಗಣನೆ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಐದು ವರ್ಷದ ಆಡಳಿತದಿಂದ ನಾಡಿನ ಜನ ಬೇಸತ್ತಿದ್ದಾರೆ. ಸಮಾಜದಲ್ಲಿ ಜಾತಿ ನಡುವೆ ವಿಷ ಬೀಜ ಬಿತ್ತಿ ಧರ್ಮ ಸಂಘರ್ಷಕ್ಕೆ ಕಾರಣರಾಗಿದ್ದಾರೆ.

ಇವರಿಗೆ ಜನತೆ ಮನೆಗೆ ಕಳಿಸಲು ನಿರ್ಧರಿಸಿದ್ದಾಗಿದೆ. ಉತ್ತರ ಪ್ರದೇಶದ ಮಾದರಿಯಂತೆ ಬಿಜೆಪಿಗೆ ರಾಜ್ಯದಲ್ಲಿ ನಿಚ್ಚಳ ಬಹುಮತ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಮುಖರಾದ ಶಿವಾನಂದ ಮಂಠಾಳಕರ್, ಗುಂಡುರೆಡ್ಡಿ, ಬ್ಯಾಂಕರೆಡ್ಡಿ, ಸೋಮನಾಥ ಪಾಟೀಲ್, ಬಸವರಾಜ ಆರ್ಯ, ಮಲ್ಲಿಕಾರ್ಜುನ, ಓಂಕಾರ ತುಂಬಾ ಇತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ