ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮನ

ಹುಬ್ಬಳ್ಳಿ:ಮೇ-3: ವಿಧಾನ‌ಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ‌ ಪರ ಪ್ರಚಾರ ನಡೆಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರಾಜ್ಯಕ್ಕೆ ಆಗಮಿಸಿದ್ದು, ಹುಬ್ಬಳ್ಳಿ ‌ವಿಮಾನ ‌ನಿಲ್ದಾಣಕ್ಕೆ ಬಂದಿಳಿದರು

ಲಖನೌನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಯೋಗಿ ಆದಿತ್ಯನಾಥ್ ರನ್ನು ಬಿಜೆಪಿ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡರು.

ಬಿಜೆಪಿ ಜಿಲ್ಲಾಧ್ಯಕ್ಷ ನಾಗೇಶ, ಕಲ್ಬುರ್ಗಿ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹೂಗುಚ್ಛ ನೀಡಿ ಸ್ವಾಗತ ಕೋರಿದರು. ಬಳಿಕ ಹೆಲಿಕಾಪ್ಟರ್ ಮುಖಾಂತರ ಶಿರಸಿಗೆ ಪ್ರಯಾಣ ಬೆಳೆಸಿದ ಯೋಗಿ ಆದಿತ್ಯನಾಥ. ಶಿರಸಿ, ಸಾಗರ, ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ‌ ಪ್ರಚಾರ ನಡೆಸಲಿದ್ದಾರೆ.‌

karnataka assembly election,BJP,CM Yogi Adithyanath

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ